ಕಡ್ತಲ ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

kadtala school
ಮಕ್ಕಳ ಗ್ರಾಮ ಸಭೆಯನ್ನು ವಿದ್ಯಾರ್ಥಿಗಳು ಉದ್ಘಾಟಿಸಿದರು.
Published on

ಹೆಬ್ರಿ: ಸರ್ಕಾರಿ ಪ್ರೌಢಶಾಲೆ ಕುಕ್ಕುಜೆಯಲ್ಲಿ ಇನ್ನರು ಶಿಕ್ಷಕರ ಕೊರತೆಯಿದ್ದು, ಶೀಘ್ರದಲ್ಲಿ ಶಿಕ್ಷಕರ ನಿಯೋಜನೆಗೆ ಸಂಬಂಧಪಟ್ಟವರು ಕ್ರಮ ವಹಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಕಡ್ತಲ ಗ್ರಾಪಂ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ತಲದಲ್ಲಿ ಇತ್ತೀಚೆಗೆ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಬೇಡಿಕೆ ಸಲ್ಲಿಸಿದರು. ಕಡ್ತಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದುರಸ್ತಿಗೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟರು. ಮುಳ್ಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಶಾಲೆಗೆ ಸರ್ವ ರೀತಿಯಲ್ಲಿ ಸಹಕಾರ ನೀಡಿ, ಉತ್ತಮ ವ್ಯವಸ್ಥೆ ಕಲ್ಪಿಸಿದ ಕಡ್ತಲ ಗ್ರಾಪಂನ್ನು ಶ್ಲಾಘಿಸಿದರು.

ಕಡ್ತಲ ಗ್ರಾಪಂ ಅಧ್ಯಕ್ಷ ಸುಕೇಶ್ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳ ಬೇಡಿಕೆ ಆದ್ಯತೆ ಮೇರೆಗೆ ಈಡೇರಿಸುವಲ್ಲಿ ಪ್ರಯತ್ನ ಮಾಡುತ್ತೇವೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಸುಧಾಕರ ಕುಲಾಲ್, ಪಿಡಿಒ ಸುರೇಖಾ, ಆರೋಗ್ಯ ಇಲಾಖೆ ಜಯಲಕ್ಷ್ಮೀ, ವಿದ್ಯಾರ್ಥಿ ನಾಯಕಿ ಖುಷಿ, ಗ್ರಾಪಂ ಸದಸ್ಯರು, ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net