More

    ಮಕ್ಕಳ ಜ್ಞಾನ ವೃದ್ಧಿಗೆ ಪೂರಕ

    ಕೂಡ್ಲಿಗಿ: ಮಕ್ಕಳ ಜ್ಞಾನ ವೃದ್ಧಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳು ಪೂರಕವಾಗುತ್ತವೆ ಎಂದು ಬಿಇಒ ಪದ್ಮನಾಭ ಕರಣಂ ಹೇಳಿದರು.

    ಇದನ್ನೂ ಓದಿ: ಜಗತ್ತಿನಲ್ಲಿ ತುಂಬಿದೆ ಅಜ್ಞಾನ, ಅಧರ್ಮ

    ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರದಲ್ಲಿ ಮಾತನಾಡಿದರು.

    ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಪಡೆದ ವಿಧ್ಯಾರ್ಥಿಗಳು ಭಿನ್ನವಾಗಿ ಕಾಣುತ್ತಾರೆ. ಅವರಲ್ಲಿ ಪರಿಸರ ಪ್ರಜ್ಞೆ, ಶಿಸ್ತು, ಸಂಯಮ, ಮಾನವೀಯ ಮೌಲ್ಯ, ಸಮಸ್ಯೆಗಳನ್ನು ಎದುರಿಸುವ ಛಲ ಹಾಗೂ ನಾಯಕತ್ವದ ಗುಣ ಕಾಣಬಹುದು. ಪಾಲಕರು ಮಕ್ಕಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತರಬೇತಿಗೆ ಸೇರಿಸಬೇಕು ಎಂದರು.

    ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಬಿ.ಶಿವಾನಂದ, ತಾಲೂಕು ಅಧ್ಯಕ್ಷ ಗೌಡ್ರು ಕೊಟ್ರೇಶ್, ಉಪಾಧ್ಯಕ್ಷೆ ಎಚ್.ಇಂದಿರಾ, ಪಿ.ವಿ.ಕೊತ್ಲಪ್ಪ, ಶಾಂತಕುಮಾರಿ,

    ಶಿಕ್ಷಣ ಸಂಯೋಜಕ ಮಂಜುನಾಥ, ನಾಗರಾಜ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಟಿ.ತಿಂದಪ್ಪ, ಲೋಕಮಾತೆ, ದಳ ನಾಯಕರಾದ ವಿ.ಹನುಮೇಶ್, ಗಂಗಮ್ಮ, ಯಶೋಧ, ಜಿ.ಶಿಲ್ಪ ಪಾಟೀಲ್, ಮಂಜುಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts