ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಶಂಭೂರು ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನವಂಬರ್ 19ರಂದು ಜರಗಿದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯಿಂದ ಅಭಿನಂದನಾ ಸಭೆಯು ಶಂಭೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜರಗಿತು.
ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಹೇಮಚಂದ್ರ ಭಂಡಾರದ ಮನೆ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಆನಂದ ಎ.ಶಂಭೂರು, ಮಕ್ಕಳ ಕಲಾಲೋಕದ ಅಧ್ಯಕ್ಷ ರಮೇಶ ಎಂ.ಬಾಯಾರು ಕೃತಜ್ಞತೆ ಸಲ್ಲಿಸಿದರು.
ಸಮಿತಿಯ ಕೋಶಾಧಿಕಾರಿ ದಯಾನಂದ ಅಡೆಪಿಲ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಮಲಾ, ಶಾಲಾಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ನಾಗರಾಜ್ ಅಡೆಪಿಲ, ಸಮಿತಿಯ ವಾಧ್ಯಮ ಸಂಚಾಲಕ ಚಿನ್ನಾ ಕಲ್ಲಡ್ಕ ಮೊದಲಾದವರಿದ್ದರು. ಮುಖ್ಯ ಶಿಕ್ಷಕ ಜಯರಾಮ ಡಿ. ಪಡ್ರೆ ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿ, ವಂದಿಸಿದರು