19ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

New Project (4)
Published on

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬಂಟ್ವಾಳ ತಾಲೂಕು 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಶಂಭೂರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಿರ್ಮಿಸಲಾಗುವ ರಾಮಚಂದ್ರ ರಾವ್ ಸಭಾಂಗಣದ ವಿ.ಮ.ಭಟ್ ವೇದಿಕೆಯಲ್ಲಿ ನ.19ರಂದು ನಡೆಯಲಿದೆ.

ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಪ್ರೇಕ್ಷಾ ಆಯ್ಕೆಯಾಗಿದ್ದಾರೆ ಎಂದು ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಹೇಮಚಂದ್ರ ಭಂಡಾರದ ಮನೆ, ಪ್ರಧಾನ ಕಾರ್ಯದರ್ಶಿ ಜಯರಾಮ ಡಿ. ಪಡ್ರೆ ತಿಳಿಸಿದ್ದಾರೆ.

ಪ್ರೇಕ್ಷಾ ಶಂಭೂರು ಗ್ರಾಮದ ಸೀನೆರೆ ಪಾಲು ಮೋಹಿನಿ, ಸುಣ್ಣಾಜೆ ದಿನೇಶ್ ಅವರ ಪುತ್ರಿ. ಪ್ರಾಥಮಿಕ ವಿದ್ಯಾಭ್ಯಾಸವನ್ನು ಉಪ್ಪಿನಂಗಡಿಯ ನಟ್ಟಿಬೈಲು ವೇದಶಂಕರ ನಗರದ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಿದ್ದು, ಪ್ರಸ್ತುತ ಶಂಭೂರು ಶಾಲೆಯಲ್ಲಿ 5ನೇ ತರಗತಿಯಿಂದ ಕಲಿಕೆ ಮುಂದುವರಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net