More

    ನೇರುಗಳಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ

    ಸೋಮವಾರಪೇಟೆ: ನೇರುಗಳಲೆ ಸಮುದಾಯ ಭವನದಲ್ಲಿ ಪಂಚಾಯತ್ ರಾಜ್ ಇಲಾಖೆ ಹಾಗೂ ನೇರುಗಳಲೆ ಗ್ರಾಮ ಪಂಚಾಯಿತಿ ಗ್ರಂಥಾಲಯದಿಂದ ಗುರುವಾರ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.


    ಶಿಬಿರಕ್ಕೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿನೋದ್‌ಕುಮಾರ್ ಚಾಲನೆ ನೀಡಿ ಮಾತನಾಡಿ, ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಅಡಗಿರುವ ಕಲಾತ್ಮಕತೆಯನ್ನು ಗುರುತಿಸಿ, ಪ್ರೋತ್ಸಾಹ ನೀಡಲು ಸಹಕಾರಿಯಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


    ವಿವೇಕಾನಂದ ಟ್ರಸ್ಟ್‌ನ ಸುನಿತಾ ಮಾತನಾಡಿ, ಗ್ರಂಥಾಲಯದಲ್ಲಿ ಪುಸ್ತಕ ಹಾಗೂ ಪತ್ರಿಕೆಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಕೃಷ್ಣಪ್ಪ ಅವರು ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು.


    ಗ್ರಂಥಾಲಯ ಮೇಲ್ವಿಚಾರಕಿ ಪದ್ಮಾವತಿ ಅವರು ಡಿಜಿಟಲ್ ಗ್ರಂಥಾಲಯದ ಉಪಯೋಗ, ಮಕ್ಕಳಲ್ಲಿ ಓದುವ ಮತ್ತು ಬರೆಯುವ ಹವ್ಯಾಸ ವೃದ್ಧಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಶಿಬಿರದಲ್ಲಿ ಒಟ್ಟು 29 ಮಕ್ಕಳು ಭಾಗಿಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts