More

    ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸೂಕ್ತ

    ಸಿರವಾರ: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ ಎಂದು ಬಿಜೆಪಿ ಮಾನ್ವಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ ಅಭಿಪ್ರಾಯ ಪಟ್ಟರು.

    ಇದನ್ನೂ ಓದಿ: ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ಕ್ಷೇತ್ರ ಸಮನ್ವಯಾಧಿಕಾರಿ ಕೆ.ಸಂತೋಷ್‌ಕುಮಾರ್ ಅಭಿಪ್ರಾಯ

    ತಾಲೂಕಿನ ಜಕ್ಕಲದಿನ್ನಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರ ಅತ್ತನೂರು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ವಿದ್ಯಾರ್ಥಿಗಳು ಓದುವುದರ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಪ್ರತಿಭೆಯನ್ನು ಹೊರಹಾಕಬೇಕು.

    ಯಾವುದೇ ಸ್ಪರ್ಧೆಗಳಿರಲಿ ಸೋಲು ಗೆಲವು ಮುಖ್ಯ ಅಲ್ಲ. ಭಾಗವಹಿಸುವುದು ಮುಖ್ಯ, ನಿಮ್ಮಲ್ಲಿ ಅಡಗಿರುವ ಕಲೆಯೊಂದಿಗೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಳ್ಳಬಹದು, ಮಕ್ಕಳಿಗೆ ದೇಶಕ್ಕಾಗಿ ಹೋರಾಡಿದ ನಾಯಕರುಗಳು ಆದರ್ಶವಾಗಬೇಕು, ಅಂತಹವರ ಪುಸ್ತಕಗಳನ್ನು ಓದಬೇಕು ಎಂದರು.

    ವಿದ್ಯಾರ್ಥಿಗಳು ಸಂಗೀತ ಸ್ಪರ್ಧೆ, ಭರತನಾಟ್ಯ, ಮಿಮಿಕ್ರಿ, ಕ್ಲೋ ಮಾಡಲಿಂಗ್, ಛದ್ಮ ವೇಶ, ರಂಗೋಲಿ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನೃತ್ಯ ಪ್ರದರ್ಶಿಸಿದರು.

    ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಯ್ಯನಗೌಡ ಏರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲೇಶಪ್ಪ, ಎಸ್ಡಿಎಂಸಿ ಅಧ್ಯಕ್ಷ ಯಮುನಪ್ಪ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೌನೇಶ ಹಿರೇಹಣಿಗಿ, ಅತ್ತನೂರು ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಆಶಾ, ಶರಣಗೌಡ ಜಕ್ಕಲದಿನ್ನಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts