ಚೀನಾಕ್ಕೆ ನಮ್ಮಿಂದ ಒಂದು ಇಂಚು ಭೂಮಿ ತೆಗೆದುಕೊಳ್ಳಲು ಸಾಧ್ಯವಿಲ್ಲ

ladakh rajnath singh
Published on

ನವದೆಹಲಿ: ಗಡಿ ವಿವಾದ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಚೀನಾದ ಜತೆ ಮಾತುಕತೆ ಜಾರಿಯಲ್ಲಿದೆ. ಆದರೆ ವಿವಾದ ಎಷ್ಟರಮಟ್ಟಿಗೆ ಪರಿಹಾರವಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ನಮ್ಮಿಂದ ಒಂದಿಂಚು ಭೂಮಿಯನ್ನೂ ಅವರಿಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಶುಕ್ರವಾರ ಲೇಹ್​ಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದು, ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ನಿಯೋಜನೆಗಳು ಕುರಿತು ಸಮಗ್ರ ಪರಿಶೀಲನೆ ನಡೆಸಿದ್ದಾರೆ.

ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​ ಮತ್ತು ಸೇನಾಪಡೆ ಮುಖ್ಯಸ್ಥ ಜನರಲ್​ ಎಂ.ಎಂ. ನರವಾನೆ ರಕ್ಷಣಾ ಸಚಿವರಿಗೆ ಸಾಥ್​ ನೀಡುತ್ತಿದ್ದಾರೆ. ಇವರೆಲ್ಲರೂ ಲುಕುಂಗ್​ ಮತ್ತು ಸ್ಟಕ್ನಾದಲ್ಲಿರುವ ಮುಂಚೂಣಿ ನೆಲೆಗಳಿಗೆ ಭೇಟಿ ನೀಡಲಿದ್ದಾರೆ.

ಮಾತುಕತೆ ಮೂಲಕವೇ ಗಡಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾದರೆ, ಅದಕ್ಕಿಂತ ಸಂತೋಷದ ಕ್ಷಣ ಮತ್ತೊಂದಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಜು.3ರಂದು ಲಡಾಖ್​ಗೆ ಅಚ್ಚರಿಯ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಮುಂಚೂಣಿ ನೆಲೆಗಳಲ್ಲಿ ನಿಯೋಜನೆಗೊಂಡಿರುವ ಯೋಧರನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲದೆ, ಭಾರತ-ಚೀನಾ ಗಡಿ ವಿವಾದವನ್ನು ಇತ್ಯರ್ಥ ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಇದೀಗ ಲಡಾಖ್​ಗೆ ಭೇಟಿ ನೀಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net