ಚಿನಕುರಳಿ ಕಾಲೇಜು ದತ್ತು ಪಡೆದು ಅಭಿವೃದ್ಧಿ

ಪಾಂಡವಪುರ: ತಾಲೂಕಿನ ಚಿನಕುರಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಭರವಸೆ ನೀಡಿದರು.

ತಾಲೂಕಿನ ಚಿನಕುರಳಿ ಗ್ರಾಮದ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ಚಿನಕುರಳಿ ಗ್ರಾಮ ಎಲ್ಲಾ ರಂಗದಲ್ಲೂ ಮುಂದಿದೆ. ನಾನು 1 ರಿಂದ 10 ನೇ ತರಗತಿವರೆಗೆ ಕಲಿತ ಶಾಲೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಹೀಗಾಗಿ ಈ ಶಾಲೆಯನ್ನು ನಮ್ಮ ಸಂಸ್ಥೆ ವತಿಯಿಂದ ದತ್ತು ಪಡೆಯುತ್ತಿದ್ದು, ಎಲ್ಲ ರೀತಿಯ ಸೌಕರ್ಯ ಕಲ್ಪಿಸಲಾಗುವುದು ಎಂದರು.

ಶಿಕ್ಷಣ ಸಚಿವ ಎನ್.ಮಹೇಶ್ ಮಾತನಾಡಿ, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಪ್ರೀತಿಯ ಒತ್ತಾಯದಿಂದ ಕೆಲಸಗಳ ಒತ್ತಡವಿದ್ದರೂ ಶಾಲಾ ಕಟ್ಟಡ ಶಂಕು ಸ್ಥಾಪನೆಗೆ ಆಗಮಿಸಿದ್ದೇನೆ. ಅವರ ಪ್ರೀತಿ ಪೂರ್ವಕ ಒತ್ತಾಯಗಳು ಸಿಎಂ ಕುಮಾರಸ್ವಾಮಿ ಅವರ ಮನಸ್ಸನ್ನೆ ಬದಲಿಸುತ್ತದೆ ಎಂದು ಹೇಳಿದರು.

ಈ ಹಿಂದೆ ಶಾಲೆಯ ಹೆಚ್ಚುವರಿ ಕಟ್ಟಡಕ್ಕೆ ಸರ್ಕಾರದಿಂದ ಒಂದು ಕೋಟಿ ರೂ. ಮಂಜೂರು ಮಾಡಲಾಗಿತ್ತು. ಸಚಿವ ಸಿ.ಎಸ್.ಪುಟ್ಟರಾಜು ಹೆಚ್ಚುವರಿ ಒಂದು ಕೋಟಿ ರೂ. ಮಂಜೂರು ಮಾಡುವಂತೆ ಸಚಿವ. ಎನ್. ಮಹೇಶ್ ಅವರಿಗೆ ಮನವಿ ಮಾಡಿದರು. ಇದಕ್ಕೆ ಮಹೇಶ್ ಒಪ್ಪಿಗೆ ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಎ.ಮಲ್ಲೇಶ್ವರಿ, ತಹಸೀಲ್ದಾರ್ ಡಿ.ಹನುಮಂತರಾಯಪ್ಪ, ತಾಪಂ ಅಧ್ಯಕ್ಷೆ ಪೂರ್ಣಿಮಾ ವೆಂಕಟೇಶ್, ಗ್ರಾಪಂ ಅಧ್ಯಕ್ಷೆ