ಚಿಂಚೋಳಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ: ಕಾಂಗ್ರೆಸ್​, ಬಿಜೆಪಿ ಅಭ್ಯರ್ಥಿಗಳಿಂದ ಮತಬೇಟೆಗೆ ಸರ್ಕಸ್​

ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್​ ಮತ್ತು ಬಿಜೆಪಿ ಅಭ್ಯರ್ಥಿಗಳು ನಾನಾ ಪ್ರಯತ್ನ ಮಾಡುತ್ತಿದ್ದಾರೆ.

ಬಂಜಾರ ಸಮುದಾಯದವರೇ ಹೆಚ್ಚಾಗಿರುವ ಕ್ಷೇತ್ರದಲ್ಲಿ ಬಂಜಾರ ಸಮುದಾಯದ ಮತ ಪಡೆಯಲು ಕಾಂಗ್ರೆಸ್​ ಅಭ್ಯರ್ಥಿ ಸುಭಾಷ್ ರಾಠೋಡ್ ಅವರು ಮಹಾರಾಷ್ಟ್ರದ ಪೌರಾದೇವಿಯಲ್ಲಿ ನೆಲೆಸಿರುವ ಬಂಜಾರ ಸಮುದಾಯದ ಗುರುಗಳಾದ ರಾಮರಾವ್ ಮಹಾರಾಜ್ ಅವರನ್ನು ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿ ಮುಂಬೈ ಪ್ರವಾಸದಲ್ಲಿರುವುದರಿಂದ ಮಾಜಿ ಶಾಸಕ ಉಮೇಶ್ ಜಾಧವ್ ಕೂಡ ಮುಂಬೈಗೆ ತೆರಳಿದ್ದಾರೆ. ಮುಂಬೈನಲ್ಲಿ ಚಿಂಚೋಳಿ ಕ್ಷೇತ್ರದ ಮತದಾರರು ನೆಲೆಸಿದ್ದು, ಬಂಜಾರ ಸಮುದಾಯದ ಮತದಾರರನ್ನು ಭೇಟಿ ಮಾಡಿ ಉಪಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿಕೊಳ್ಳಲಿದ್ದಾರೆ. ನಂತರ ಉಮೇಶ್​ ಜಾಧವ್​ ಕೂಡ ರಾಮಾರಾವ್ ಮಹಾರಾಜರನ್ನು ಭೇಟಿಯಾಗಿ ಬೆಂಬಲ ಕೋರಲಿದ್ದಾರೆ ಎನ್ನಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *