More

    ಚಿಂಚೋಳಿ: ‘ಹೆಂಡ- ಸಾರಾಯಿ ಸಹವಾಸ, ಹೆಂಡಿರು ಮಕ್ಕಳು ಉಪವಾಸ’ ಬೃಹತ್ ಜನಜಾಗೃತಿ ಜಾಥಾ

    ಚಿಂಚೋಳಿ: ಸಾರಾಯಿ ವಿರೋಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಬಸ್ ನಿಲ್ದಾಣದಿಂದ ಸದ್ಗುರು ಶ್ರೀ ಮಹಾಂತೇಶ್ವರ ಮಠದವರೆಗೆ ಆಯೋಜಸಿದ್ದ ಬೃಹತ್ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಪಿಎಸ್ಐ ಹಣಮಂತಪ್ಪ ಬಂಕಲಗಿ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ). ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ನಿಮಿತ್ತ ದುಶ್ಚಟ ಮಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಜಾಥಾ ನಡೆಸಿದರು.

    ರಸ್ತೆಯ ಉದ್ದಗಲಕ್ಕೂ ಮಹಿಳೆಯರು ಹೆಂಡ ಸಾರಾಯಿ ಸಾಹವಾಸ ಹೆಂಡಿರು ಮಕ್ಕಳು ಉಪವಾಸ ಎಂಬ ಘೋಷವಾಕ್ಯದೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

    ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷೆ ನರಸಮ್ಮ ಆವಂಟಿ, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ, ಕಸಾಪ ತಾಲೂಕು ಅಧ್ಯಕ್ಷ ಸುರೇಶ್ ದೇಶಪಾಂಡೆ, ಲಕ್ಷ್ಮಣ ಆವಂಟಿ ಸೇರಿದಂತೆ ಅನೇಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts