More

    ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಿಕೊಡಿ

    ಪಾಂಡವಪುರ: ಗ್ರಾಮೀಣ ಮಕ್ಕಳ ಪ್ರತಿಭೆ ಹೊರಹಾಕಲು ಪಾಲಕರು ಹಾಗೂ ಶಿಕ್ಷಕರು ವೇದಿಕೆ ಕಲ್ಪಿಸಿಕೊಡಬೇಕು ಎಂದು ಬಿಜಿಎಸ್ ಹೇಮಗಿರಿ ಶಾಖೆಯ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಹೇಳಿದರು.

    ತಾಲೂಕಿನ ಚಿನಕುರಳಿಯ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಡಾ.ಬಾಲಗಂಗಾಧರ ಸ್ವಾಮೀಜಿ 80ನೇ ವರ್ಷದ ಜಯಂತಿ, 11ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಮಕ್ಕಳ ಭೌತಿಕ ಮತ್ತು ಮಾನಸಿಕ ವಿಕಸನಕ್ಕಾಗಿ ಮೊಬೈಲ್ ‘ವರವೋ-ಶಾಪವೋ’ ವಿಷಯ ಕುರಿತ ಚಿಣ್ಣರ ಜಾಣರ ಜಗುಲಿ ಎಂಬ ಹರಟೆ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.

    ಗ್ರಾಮೀಣ ಮಕ್ಕಳಲ್ಲಿ ಪ್ರತಿಭೆ ಇರುತ್ತದೆ. ಅವರ ಪ್ರತಿಭೆ ಹೊರ ಹಾಕಲು ಸೂಕ್ತ ವೇದಿಕೆ ದೊರಕದೆ ಹಾಗೂ ಹಿಂಜರಿಕೆಯ ಮನೋಭಾವದಿಂದ ಹಿಂದೆ ಉಳಿಯುತ್ತಾರೆ. ಇವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು ಎಂದು ಹೇಳಿದರು.

    ಸಾಹಿತಿ ಡುಂಡಿರಾಜ್ ನೇತೃತ್ವದಲ್ಲಿ ನಡೆದ ಚಿಣ್ಣರ ಜಾಣರ ಜಗುಲಿ ಹರಟೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಚರ್ಚಿಸಿದರು.
    ಕಾರ್ಯಕ್ರಮಕ್ಕೂ ಮೊದಲು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದ ಪಾಲಕರಿಗೆ ಪಾದಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ್ ಮಾತನಾಡಿ, ಆಧುನಿಕತೆಯ ಜತೆಗೆ ಆಚಾರ, ವಿಚಾರ, ವೈಚಾರಿಕತೆ, ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು. ಜಿಪಂ ಮಾಜಿ ಸದಸ್ಯೆ ಶಾಂತಲಾ ರಾಮಕೃಷ್ಣೇಗೌಡ, ಗ್ರಾಪಂ ಅಧ್ಯಕ್ಷೆ ಗಾಯತ್ರಿಕುಮಾರ್, ಉಪಾಧ್ಯಕ್ಷ ಶ್ರೀನಿವಾಸ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ಹಿರಿಯ ಪತ್ರಕರ್ತ ಎನ್.ಕೃಷ್ಣೇಗೌಡ, ಇಂದ್ರಾಣಿ, ಜ್ಯೋತಿ, ಮೇನಾಗ್ರ ಪ್ರಕಾಶ್, ಯ.ತಮ್ಮಣ್ಣಗೌಡ, ಚಂದ್ರಶೇಖರಯ್ಯ, ಚಿದಂಬರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts