More

    ಎಲ್​ಜೆಪಿಯಲ್ಲಿ ಚಿರಾಗ್​ ಒಬ್ಬಂಟಿ! ಅಧ್ಯಕ್ಷ ಸ್ಥಾನದಿಂದ ಕಿಕ್​ಔಟ್!

    ಪಟನಾ: ಲೋಕ ಜನಶಕ್ತಿ ಪಕ್ಷ (ಎಲ್​ಜೆಪಿ)ದ ಅಧ್ಯಕ್ಷ ಸ್ಥಾನದಲ್ಲಿದ್ದ ಚಿರಾಗ್​ ಪಾಸ್ವಾನ್​ ಅವರನ್ನು ಅವರದ್ದೇ ಪಕ್ಷದ ಬಂಡಾಯ ಸಂಸದರು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದಾರೆ. ಒನ್ ಮ್ಯಾನ್ ಒನ್​ ಪೋಸ್ಟ್ ಇರಬೇಕೆಂಬ ಪ್ರಿನ್ಸಿಪಲ್​ ಆಧಾರದಲ್ಲಿ ಈ ರೀತಿಯ ತೀರ್ಮಾನ ತೆಗೆದುಕೊಂಡಿರುವುದಾಗಿ ಸಂಸದರು ಹೇಳಿದ್ದಾರೆ.

    ಸದ್ಯ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದ್ದು, ಸದ್ಯದಲ್ಲೇ ಎಲ್​ಜೆಪಿ ಸಂಸದೀಯ ಮಂಡಳಿಯ ನಾಯಕ ಸ್ಥಾನದಿಂದಲೂ ತೆಗೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

    ಸದ್ಯದಲ್ಲೇ ಪಕ್ಷದ ರಾಷ್ಟ್ರೀಯ ಕಾಮಕಾರಿ ಸಭೆ ನಡೆಯಲಿದ್ದು, ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಅಲ್ಲಿಯವರೆಗೆ ಸೂರಜ್​ ಭನ್​ ಅವರನ್ನು ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸುವುದಾಗಿ ಹೇಳಲಾಗಿದೆ.

    ಎಲ್​ಜೆಪಿಯಲ್ಲಿ ಸೋಮವಾರ ಇದ್ದಕ್ಕಿದ್ದಂತೆ ದಿಢೀರ್​ ಬೆಳವಣಿಗೆಯಾಗಿದ್ದು, ಐವರು ಸಂಸದರು ಬಂಡೆದ್ದಿದ್ದಾರೆ. ಚಿರಾಗ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಾಸ್ ಅವರನ್ನು ಸಂಸದೀಯ ಪಕ್ಷದ ನೂತನ ನಾಯಕ ಎಂದು ಘೋಷಿಸಿಬಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿರಾಗ್, “ನನ್ನ ತಂದೆ ಕಟ್ಟಿದ ಪಕ್ಷವನ್ನು ಒಟ್ಟಿಗೆ ಇಟ್ಟುಕೊಳ್ಳಲು ಪ್ರಯತ್ನಿಸಿದೆವು ಆದರೆ ಅದು ವಿಫಲವಾಗಿದೆ.” ಎಂದು ಟ್ವೀಟ್​ ಮೂಲಕ ಹೇಳಿದ್ದಾರೆ. (ಏಜೆನ್ಸೀಸ್)

    17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

    ಗಂಡನನ್ನು ಕೊಂದು ಆತನ ಮರ್ಮಾಂಗ ಫ್ರೈ ಮಾಡಿದ ಹೆಂಡತಿ! ಮಹಿಳೆಯ ಹುಚ್ಚಾಟ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts