

ಮೂರು ಅಂತಸ್ತಿನ ರಿವರ್ ವ್ಯಾಲಿ ರಸ್ತೆಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 23 ರಿಂದ 55 ವರ್ಷದೊಳಗಿನ ಆರು ವಯಸ್ಕರು ಮತ್ತು 6 ರಿಂದ 10 ವರ್ಷದೊಳಗಿನ 16 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇದರಲ್ಲಿ ಪಚನ್ ಕಲ್ಯಾಣ್ ಅವರ ಏಳು ವರ್ಷದ ಕಿರಿಯ ಮಗ ಕೂಡ ಗಾಯಗೊಂಡಿದ್ದಾನೆ.
Pawan kalyan| ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್, ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಈ ಘಟನೆಯಲ್ಲಿ ಮಾರ್ಕ್ ಶಂಕರ್ಗೆ ಕೈ ಮತ್ತು ಕಾಲುಗಳಿಗೆ ತೀವ್ರ ಪ್ರಮಾಣದಲ್ಲಿ ಸುಟ್ಟಗಾಯಗಳಾಗಿವೆ. ಇದೀಗ ಮಗನ ಆರೋಗ್ಯದ ಬಗ್ಗೆ ಪವನ್ ಪ್ರತಿಕ್ರಿಯೆ ನೀಡಿದ್ದಾರೆ.
ಮಗನ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪವನ್ ಕಲ್ಯಾಣ್, ನನ್ನ ಮಗನ ಶ್ವಾಸಕೋಶಕ್ಕೆ ಹಾನಿಯಾಗಿದ್ದರಿಂದ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮಾರ್ಕ್ ಶಂಕರ್ ತನ್ನ ಶಾಲೆಯಲ್ಲಿ ಬೇಸಿಗೆ ರಜೆಯಲ್ಲಿ ಭಾಗಿಯಾಗಿದ್ದರು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ, ಈ ದುರಂತದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಮಾರ್ಕ್ ಶಂಕರ್ ಜೊತೆ ಇತರ ವಿದ್ಯಾರ್ಥಿಗಳೂ ಇದ್ದರು, ನಾವು ಊಹೆಮಾಡಿದ್ದಕ್ಕಿಂತಲೂ ಹೆಚ್ಚಿನ ಸಮಸ್ಯೆ ಆಗಿದೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ಶಂಕರ್ ಕಾಲು ಹಾಗೂ ಕೈಗೆ ಸುಟ್ಟ ಗಾಯಗಳಾಗಿದ್ದು, ಅವನ ದೇಹದಲ್ಲಿ ಸಾಕಷ್ಟು ಹೊಗೆ ಸೇರಿಕೊಂಡಿದೆ. ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ. ಅವನ ಶ್ವಾಸಕೋಶವನ್ನು ಸರಿಪಡಿಸಲು ಬ್ರಾಂಕೋಸ್ಕೋಪಿ ಮಾಡಲಾಗಿದೆ. ನನ್ನ ಮಗನ ಮುಂದೆ ಕುಳಿತಿದ್ದ ಮತ್ತೋರ್ವನಿಗೆ ಇನ್ನೂ ಹೆಚ್ಚಿನ ಗಾಯಗಳು ಆಗಿವೆ ಎಂದು ಪವನ್ ಕಲ್ಯಾಣ್ ಮಾಹಿತಿ ಹಂಚಿಕೊಂಡಿದ್ದಾರೆ.
ಪವನ್ ಕಲ್ಯಾಣ್ ಅವರು ಈ ವಿಚಾರ ತಿಳಿಯುತ್ತಿದ್ದಂತೆ ಸಾಕಷ್ಟು ಆತಂಕಗೊಂಡಿದ್ದಾರೆ. ಮಗ ಮಾರ್ಕ್ ಶಂಕರ್ ಅವರನ್ನು ನೋಡಲು ಚಿರಂಜೀವಿ ಹಾಗೂ ಪತ್ನಿ ಸುರೇಖಾ ರಶ್ ಸಿಂಗಾಪುರಕ್ಕೆ ತೆರಳಿದ್ದಾರೆ. ಅವರು ಅಲ್ಲಿ ಸ್ವಲ್ಪ ಸಮಯ ಕಳೆದು ಆ ಬಳಿಕ ಮರಳಲಿದ್ದಾರೆ. ಪವನ್ ಕಲ್ಯಾಣ್ ಮಗನ ಆರೋಗ್ಯದಲ್ಲಿ ಬೇಗ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
(ಏಜೆನ್ಸೀಸ್)