More

    ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಶಿಬಿರ ಸಹಕಾರಿ : ಚಿತ್ತಾರ ಚಿಣ್ಣರ ಚಿಲಿಪಿಲಿ ಉದ್ಘಾಟನೆ

    ವಿಜಯವಾಣಿ ಸುದ್ದಿಜಾಲ ಕೋಟ

    ಮಕ್ಕಳ ಬೌಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ. ಮುಗಟಛಿ ಮಕ್ಕಳಿಗೆ ಆರಂಭದಲ್ಲೇ ಹೆಚ್ಚಿನ ಮಾಹಿತಿ ನೀಡಬೇಕಾದ ಅವಶ್ಯಕತೆ ಇದೆ, ಮೊಬೈಲ್ ಗೀಳು ಇರುವ ಈ ಕಾಲಘಟ್ಟದಲ್ಲಿ ಬೇಸಿಗೆ ಶಿಬಿರಗಳು ಮಕ್ಕಳ ಮನಸ್ಥಿತಿ ಬದಲಾವಣೆಗೆ ಯೋಗ್ಯ ಎಂದು ಉದ್ಯಮಿ ಬಿಜು ನಾಯರ್ ಹೇಳಿದರು.

    ಕೋಟ ಗ್ರಾಪಂ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ, ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ, ಕೋಟ ಗ್ರಾಪಂ ನೇತೃತ್ವದಲ್ಲಿ ಎರಡನೇ ದಿನದ ಬೇಸಿಗೆ ಶಿಬಿರದ ಚಿತ್ತಾರ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
    ಸಂಘಸಂಸ್ಥೆಗಳು ಬೇಸಿಗೆ ಶಿಬಿರ ಆಯೋಜಿಸಿ ಸಮಾಜಕ್ಕೆ ಪೂರಕವಾದ ಮೌಲ್ಯ ನೀಡುತ್ತಿರುವುದು ಶ್ಲಾಘನೀಯ ಎಂದರು.

    ಸಂಪನ್ಮೂಲ ವ್ಯಕ್ತಿ ರೋಹಿತ್ ಬೈಕಾಡಿ ಅವರನ್ನು ಗೌರವಿಸಲಾಯಿತು. ಕೋಟ ಪಂಚವರ್ಣ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ, ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಪನ್ಮೂಲ ವ್ಯಕ್ತಿ ಜಯಲಕ್ಷ್ಮೀ ಟೀಚರ್ ಉಪಸ್ಥಿತರಿದ್ದರು.

    ಕಾರ್ಯಕ್ರಮ ಸಂಯೋಜಕ ಇಂಡಿಕಾ ಕಲಾ ಬಳಗದ ಸಂತೋಷ್ ಕುಮಾರ್ ಕೋಟ ನಿರೂಪಿಸಿ, ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಶಕೀಲಾ ಎನ್.ಪೂಜಾರಿ ಸ್ವಾಗತಿಸಿ, ಪಂಚವರ್ಣದ ಸಂಚಾಲಕಿ ಸುಜಾತಾ ಬಾಯರಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts