More

    ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮವಹಿಸಿ,ಎಸಿ


    ಚಿತ್ರದುರ್ಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ವಾದ ಮತಗಟ್ಟೆಗಳಲ್ಲಿ ಈ ಬಾರಿ ಮತ ದಾನದ ಪ್ರಮಾಣವನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ವಹಿಸಬೇಕು. ಇದಕ್ಕಾಗಿ ವಿಶೇಷ ಸ್ವಿಪ್ ಚಟುವಟಿಕೆಗಳನ್ನು ನಡೆಸುವಂತೆ ಉಪವಿಭಾಗಾಧಿಕಾರಿ,ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.

    ಚಿತ್ರದುರ್ಗ ತಾಪಂನಲ್ಲಿ ಮಂಗಳವಾರ ಗ್ರಾಪಂ ಅಭಿವೃದ್ಧಿ ಅಧಿಕಾರಿ,ಕಾರ‌್ಯದರ್ಶಿ,ಲೆಕ್ಕ ಸಹಾಯಕರು,ತಾಂತ್ರಿಕ ಸಹಾಯಕರು ಹಾ ಗೂ ಡಾಟಾ ಎಂಟ್ರಿ ಆಪರೇಟರ್‌ಗಳ ಸಭೆಯಲ್ಲಿ ಮಾತನಾಡಿ,ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳಿರ ಬೇಕು. ಬ್ಯಾನರ್,ಕಟೌಟ್‌ಗಳು ತೆರವಾಗಿರುವುದನ್ನು ಖಚಿತಪಡಿಸಿಕೊಳ್ಳ ಬೇಕು. ಗ್ರಾಪಂ ವ್ಯಾಪ್ತಿಗಳಲ್ಲಿ ಮಾದರಿ ನೀತಿ ಸಂಹಿತೆ ನಿಗಾ ಜವಾಬ್ದಾರಿ ಗ್ರಾಪಂ ಅಭಿವೃದ್ಧಿ ಅಧಿ ಕಾರಿಗಳದ್ದಾಗಿದೆ.

    ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದರೆ ತಕ್ಷಣ ಪ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಮಾಹಿತಿ ನೀಡಬೇಕು. ಸಿ-ವಿಜಿಲ್ ಆ್ಯ ಪ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಬೇಕೆಂದರು. ತಾಪಂ ಇಒ ಎಚ್.ಹನುಮಂತಪ್ಪ,ಸಹಾಯ ಕ ನಿರ್ದೇಶಕರಾದ ಆರ್.ಚೈತ್ರಾ,ಪಿ.ಟಿ.ಧನಂಜಯ ಇತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts