ಡೆಂೆ, ಚಿಕೂನ್‌ಗುನ್ಯಾ ಹೆಚ್ಚಳಕ್ಕೆ ಡಿಸಿ ಗರಂ

ಚಿತ್ರದುರ್ಗ: ಸೊಳ್ಳೆ ನಿಯಂತ್ರಣ ಕಾರ್ಯಗಳ ವೈಫಲ್ಯದಿಂದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಡೆಂೆ ಮತ್ತು ಚಿಕೂನ್‌ಗುನ್ಯಾ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆರೋಗ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ ಡೆಂೆ, ಚಿಕೂನ್‌ಗುನ್ಯಾ ಪ್ರಕರಣಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಸೂಚಿಸಿದರು.

ಆರೋಗ್ಯ ಕಾರ್ಯಕರ್ತರು ಮನೆ, ಮನೆಗೆ ಭೇಟಿ ನೀಡಿ ಸೊಳ್ಳೆಗಳ ಉತ್ಪತ್ತಿ ತಾಣಗಳ ನಿರ್ಮೂಲನೆಗೆ ಕ್ರಮ ವಹಿಸಬೇಕು. ಆದರೆ ಜಿಲ್ಲೆಯಲ್ಲಿ ಇದು ಸಮರ್ಪಕವಾಗಿ ನಡೆದಿಲ್ಲ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ ಮಾತನಾಡಿ, ಪ್ರಸಕ್ತ ವರ್ಷ 58 ಡೆಂೆ ಮತ್ತು 39 ಚಿಕೂನ್‌ಗುನ್ಯ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದರು.

ಜ್ವರ ಕಂಡುಬಂದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆಶಾ ಕಾರ್ಯಕರ್ತರು ಲಾರ್ವಾ ಸಮೀಕ್ಷೆಗೆ ಬಂದಾಗ ಸಹಕರಿಸುವಂತೆ ಕೋರಿದರು. ಸಭೆಯಲ್ಲಿ ಜಿಲ್ಲಾ ನಿವಾಸಿ ಆರೋಗ್ಯಾಧಿಕಾರಿ ಡಾ.ಆನಂದಪ್ರಕಾಶ್, ಆರೋಗ್ಯ ಇಲಾಖೆ ಅನುಷ್ಠಾನಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *