ಚಿತ್ರದುರ್ಗ: ನಿವೃತ್ತ ನೌಕರರಿಗೂ ನಗದು ರಹಿತ ಆರೋಗ್ಯ ಚಿಕಿತ್ಸೆಗೆ ಅವಕಾಶ ಮಾಡಿ ಕೊಡ ಬೇಕೆಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಎಲ್.ಭೈರಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಸಂಘದ ಜಿಲ್ಲಾ ಶಾಖೆ ನಗರದ ಕೆಇಬಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ನಿವೃತ್ತ ನೌಕರರ ದಿನಾಚರಣೆ, ಕ್ಯಾಲೆಂಡರ್ ಬಿಡುಗಡೆ ಹಾಗೂ ಸರ್ವಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ಹಾಲಿ ನೌಕರರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶವಿದೆ. ಆದರೆ, ನಿವೃತ್ತರಿಗೆ ಸರ್ಕಾರಿ ಅಸ್ಪತ್ರೆಗೆ ಹೋಗುವಂತೆ ಹೇಳಲಾಗುತ್ತಿದೆ ಎಂದು ಬೇಸರಿಸಿದರು.
ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಕೆ.ಜಿ.ಜಗದೀಶ್, ಪ್ರಧಾನ ಕಾರ್ಯದರ್ಶಿ ರಂಗೇಗೌಡ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಜಿಲ್ಲಾಧ್ಯಕ್ಷ ಆರ್.ರಂಗಪ್ಪ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಅಡಿವೆಪ್ಪ ವೈ.ಬೆಂಡಿಗೇರಿ, ಮಲ್ಲಪ್ಪ ಸಿ.ಮುದಕವಿ, ಕೆ.ಜಿ.ಜಗದೀಶ್ ಇದ್ದರು.