ಸಕಾಲಕ್ಕೆ ಅರೋಗ್ಯ ತಪಾಸಣೆ ಇರಲಿ

ಚಿತ್ರದುರ್ಗ: ನಗರದ ಐಎಂಎ ಹಾಲ್‌ನಲ್ಲಿ ಭಾನುವಾರ ವೈದ್ಯರ ದಿನಾಚರಣೆ ಹಿನ್ನೆಲೆಯಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ ಮಾತನಾಡಿ, ಕಾಲಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದಲ್ಲಿನ ಚಿಕ್ಕ ಬದಲಾವಣೆ ಕಂಡರೂ ನಿರ್ಲಕ್ಷೃ ವಹಿಸದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದರು.

ಬಸವೇಶ್ವರ ಆಸ್ಪತ್ರೆ ವೈದ್ಯರು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ನೂರಕ್ಕೂ ಹೆಚ್ಚು ರೋಗಿಗಳ ತಪಾಸಣೆ ನಡೆಸಿ ಉಚಿತ ಔಷಧ ನೀಡಿದರು.

ಜಿಲ್ಲಾ ಶಸಚಿಕಿತ್ಸಕ ಡಾ.ಜಯಪ್ರಕಾಶ್, ಐಎಂಎ ಜಿಲ್ಲಾಧ್ಯಕ್ಷ ಡಾ.ಶಿವಾನಂದಪ್ಪ, ಗೌರವ ಕಾರ್ಯದರ್ಶಿ ಡಾ.ತಿಮ್ಮಾರೆಡ್ಡಿ ಕಾತರಕಿ, ಹಿರಿಯ ತಜ್ಞರಾದ ಡಾ.ನಾರಾಯಣಮೂರ್ತಿ, ಡಾ.ಅಮರ್‌ದೀಪ್, ಡಾ.ಎಂ.ಆರ್. ಹನುಮಂತಪ್ಪ, ಡಾ.ಪಿ.ವಿ.ಶ್ರೀಧರಮೂರ್ತಿ, ಡಾ.ಅನುಷಾ ಭಾಗವಹಿಸಿದ್ದರು.

Leave a Reply

Your email address will not be published. Required fields are marked *