ಮೋದಿ ಗೆಲುವಿಗಾಗಿ ಹನುಮನಿಗೆ ಮೊರೆ

ಚಿತ್ರದುರ್ಗ: ದೇಶದ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಈ ನಮ್ಮ ಬೇಡಿಕೆ ಈಡೇರಿಸುವಂತೆ ಸಂಘ ಪರಿವಾರದ ಕಾರ್ಯಕರ್ತರು ಆಂಜನೇಯ ಸ್ವಾಮಿಗೆ ಶನಿವಾರ ವಿಶೇಷ ಪೂಜೆ ಸಲ್ಲಿಸಿದರು.

ನಗರದಿಂದ ತಮಟಕಲ್ಲು ಗ್ರಾಮದವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ದೇಶದ ಏಕತೆಗೆ ಮೋದಿ ನಾಯಕತ್ವ ಅಗತ್ಯ ಇದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಮೋದಿ ಪ್ರಧಾನಿ ಆಗಬೇಕು ಎಂದು ಪ್ರಾರ್ಥಿಸಿದರು.

ಚಿತ್ರದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನೇಕಲ್ ನಾರಾಯಣಸ್ವಾಮಿ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿ ಎಂದು ಇದೇ ವೇಳೆ ದೇವರಲ್ಲಿ ಬೇಡಿಕೊಂಡರು.

ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರಾದ ಪಿ.ರುದ್ರೇಶ್, ಸಂಜಯ್, ಕಿರಣ್, ದೇವು, ಯೋಗಿಶ್ ಅನೇಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *