More

    ತಂಬಾಕು ರಹಿತ ಸಮಾಜಕ್ಕೆ ಮನವಿ

    ಚಿತ್ರದುರ್ಗ: ಬೀಡಿ, ಸಿಗರೇಟು ಮತ್ತಿತರ ತಂಬಾಕು ಉತ್ಪನ್ನಗಳಿಂದ ಸಮಾಜವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಯವಜನರ ಪಾತ್ರ ಹಿರಿದೆಂದು ಎನ್‌ಟಿಸಿಪಿ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್ ಹೇಳಿದರು.

    ಜಿಲ್ಲಾ ತಂಬಾಕು ನಿಯಂತ್ರಣ ಕೋಶ ನಗರದ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆಯಲ್ಲಿ ಮಾತನಾಡಿ, ತಂಬಾಕು ಚಟ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದರು.

    18 ವರ್ಷದೊಳಗಿನ ಮಕ್ಕಳಿಗೆ, ತಂಬಾಕು, ಬೀಡಿ, ಸಿಗರೇಟ್ ಮಾರಾಟ ಅಪರಾಧ ಎಂದು ಹೇಳಿದರು. ಎನ್‌ಟಿಸಿಪಿ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ ಮಾತನಾಡಿದರು. ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಕೆ.ಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ್ ನಾಡರ್, ಲಕ್ಷ್ಮೀಬಾಯಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts