ಚಿತ್ರದುರ್ಗ: ಬೆಸ್ಕಾಂ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜೂ.4ರಂದು ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಭರಮಸಾಗರ ವಿದ್ಯುತ್ ವಿತರಣ ಕೇಂದ್ರದಿಂದ ಹೊರಡುವ ಎಲ್ಲ ಜಾಲಗಳ 11 ಕೆವಿ ಮಾರ್ಗಗಳಲ್ಲಿ ಅಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆದ್ದರಿಂದ ಈ ಮಾರ್ಗಕ್ಕೆ ಒಳಪಡುವ ಸುತ್ತಮುತ್ತಲಿನ ಗ್ರಾಮಗಳ ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಕೋರಿದೆ.