More

    ಅರ್ಹರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ

    ಚಿತ್ರದುರ್ಗ: ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ವಿವಿಧ ಇಲಾಖೆ ಮುಖ್ಯಸ್ಥರೊಂದಿಗೆ ಚರ್ಚಿಸುವುದಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವೈ.ವಟವಟಿ ಹೇಳಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ನಗರದ ಸರಸ್ವತಿ ಕಾನೂನು ಕಾಲೇಜಲ್ಲಿ ಮಂಗಳವಾರ ಆಯೋಜಿಸಿದ್ದ ಮಕ್ಕಳ ರಕ್ಷಣೆಗೆ ಸೌಹಾರ್ದ ಕಾನೂನು ಸೇವೆಗಳ ಯೋಜನೆ 2015 ಹಾಗೂ ಪೋಕ್ಸೊ ಕುರಿತ ಕಾನೂನು-ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಂದಾಯ, ಆರೋಗ್ಯ ಕ್ಷೇತ್ರಗಳು ಸೇರಿ ರಾಜ್ಯ, ಕೇಂದ್ರ ಸರ್ಕಾರಗಳು ಹಲವು ಇಲಾಖೆಗಳಲ್ಲಿ ಅರ್ಹ ಫಲಾನುಭವಿಗಳಿಗೆ ನಾನಾ ಸೌಲಭ್ಯ ಕಲ್ಪಿಸಿವೆ. ಅದರಿಂದ ವಂಚಿತರಾದ ಅರ್ಹರನ್ನು ಗುರುತಿಸಿ ಅವರಿಗೆ ಸೌಲಭ್ಯ ತಲುಪಿಸ ಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ, ಅರ್ಹರ ಪಟ್ಟಿ ಒದಗಿದರೆ, ಇಲಾಖೆ ಮುಖ್ಯಸ್ಥರೊಂದಿಗೆ ಚರ್ಚಿಸಿ ಸೌಲಭ್ಯ ಕೊಡಿಸಲಾಗುವುದು. ಇದಕ್ಕಾಗಿ ವಿದ್ಯಾರ್ಥಿಗಳೊಂದಿಗೆ ಸಮೀಕ್ಷೆ ನಡೆಸಬೇಕೆಂದು ಕಾಲೇಜಿನ ಪ್ರಾಚಾರ‌್ಯ, ಉಪನ್ಯಾಸಕರಿಗೆ ಸಲಹೆ ನೀಡಿದರು.

    ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಡಿ.ಕೆ.ಶೀಲಾ, ಪ್ರಾಂಶುಪಾಲೆ ಪ್ರೊ.ಎಂ.ಎಸ್.ಸುಧಾದೇವಿ, ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ಗಿರೀಶ್, ವಕೀಲರ ಸಂಘದ ಅಧ್ಯಕ್ಷ ಎಸ್.ವಿಜಯ ಕುಮಾರ್, ಉಪಾಧ್ಯಕ್ಷ ಟಿ.ನಾಗೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಅನಿಲ್‌ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಆರ್.ವೆಂಕಟಲಕ್ಷ್ಮೀ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts