ಚಿತ್ರದುರ್ಗ: ಅಡ್ವೋಕೇಟ್ಸ್ ಫೋರಂ ವಕೀಲರು ಪೌರತ್ವ ಕಾಯ್ದೆ ಬೆಂಬಲಿಸಿ ನಗರದಲ್ಲಿ ಸೋಮವಾರ ಮೆರವಣಿಗೆ ನಡೆಸಿದರು.
ಸಿಎಎ, ಎನ್‌ಆರ್‌ಸಿ ಕಾಯ್ದೆ ದೇಶಕ್ಕೆ ಅನುಕೂಲಕರ ವಾತಾವರಣ ಕಲ್ಪಿಸುತ್ತದೆ. ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರ ಹಾಕಲು ಕಾಯ್ದೆ ಪರಿಣಾಮಕಾರಿ ಆಗಿದೆ ಎಂದು ಘೋಷಣೆ ಕೂಗಿದರು.
ಕೋರ್ಟ್ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದ ವಕೀಲಕರು ಕಾಯ್ದೆ ಬೆಂಬಲಿಸಿ ಜಾಗೃತಿ ಮೂಡಿಸಿದರು.
ಸಿಎಎ ರಾಷ್ಟ್ರದ ಹಿತದೃಷ್ಟಿ, ಏಕತೆ ಮತ್ತು ಸುರಕ್ಷತೆಗಾಗಿ ಜಾರಿ ತರಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಭಾರತೀಯನು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಅನ್ನು ಸರ್ವಾನುಮತದಿಂದ ಬೆಂಬಲಿಸಬೇಕು. ಬೇರೆ ದೇಶಗಳ ಅಕ್ರಮ ನುಸುಳುಕೋರರನ್ನು ಗುರುತಿಸಲು ಸಿಎಎ ಸಹಕಾರಿಯಾಗಲಿದೆ. 2019ರ ಸಿಎಎ ತಿದ್ದುಪಡಿ ಕಾಯ್ದೆ ಭಾರತೀಯ ಯಾವುದೇ ಸಮುದಾಯದ, ಯಾವುದೇ ವ್ಯಕ್ತಿಯ ಹಕ್ಕನ್ನು ಕಸಿದುಕೊಳ್ಳುವುದಿಲ್ಲ. ಈ ಕಾಯ್ದೆಯನ್ನು ಯಶಸ್ವಿಯಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಮಾಡಿದರು.
ಪೌರತ್ವ ಕಾಯ್ದೆ ಜಾರಿ ಬೆಂಬಲಿಸಿ ಪ್ರತಿಭಟನೆ
ಉಡುಗೆಗೆ ಮ್ಯಾಚ್ ಆಗುವ ಲಿಪ್ಸ್ಟಿಕ್ ಆಯ್ಕೆ ಮಾಡುವುದೇಗೆ?; ಇಲ್ಲಿದೆ ಸಿಂಪಲ್ ಟಿಪ್ಸ್ | Beauty Tips
ನಾವು ಮದುವೆಗೆ ಚೆಂದದ ಬಟ್ಟೆಗಳನ್ನು ಆಯ್ಕೆ ಮಾಡುತ್ತೇವೆ. ಆದ್ದರಿಂದ ಯಾರೂ ನಮಗಿಂತ ಹೆಚ್ಚು ಸುಂದರವಾಗಿ ಕಾಣುವುದಿಲ್ಲ.…
ಚಳಿಗಾಲದಲ್ಲಿ ವಿಟಮಿನ್ ಡಿ ಕೊರತೆಯೇ?; ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ | Health Tips
ಚಳಿಗಾಲದಲ್ಲಿ ಸೂರ್ಯನ ಬೆಳಕಿನ ಕೊರತೆಯಿಂದ ವಿಟಮಿನ್ ಡಿ ಕೊರತೆ ಉಂಟಾಗುತ್ತದೆ. ಆದರೆ ಈ ಪೋಷಕಾಂಶವು ಅನೇಕ…
Mushrooms for Cancer: ಅಣಬೆ ತಿಂದರೆ ಯಾವುದೇ ಕ್ಯಾನ್ಸರ್ ಇದ್ರು ಕಂಟ್ರೋಲ್…!
Mushrooms for Cancer : ಕ್ಯಾನ್ಸರ್ ರೋಗ ಅಪಾಯಕಾರಿ. ಕ್ಯಾನ್ಸರ್ ಚಿಕಿತ್ಸೆಯು ತುಂಬಾ ದುಬಾರಿಯಾಗಿದೆ. ಕ್ಯಾನ್ಸರ್ನಲ್ಲಿ…