More

    ಸ್ವಚ್ಛತೆಯೇ ಆರೋಗ್ಯದ ಮೂಲಮಂತ್ರ

    ಚಿತ್ರದುರ್ಗ: ಸಾರ್ವಜನಿಕರು ಕೀಟಜನ್ಯ ಮತ್ತು ಸಾಂಕ್ರಾಮಿಕ ರೋಗಗಳಿಂದ ಮುಕ್ತರಾಗಲು ತಮ್ಮ ಮನೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸಲಹೆ ನೀಡಿದರು.

    ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ತಿಪ್ಪಾರೆಡ್ಡಿ ನಗರದ ಕೊಳಚೆ ಪ್ರದೇಶದಲ್ಲಿ ಆಯೋಜಿಸಿದ್ದ ಕೀಟಜನ್ಯ ರೋಗಗಳ ನಿಯಂತ್ರಣ ‘ನಾಗರಿಕರಿಗೊಂದು ಸವಾಲ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸ್ವಚ್ಛತೆಗೆ ಆದ್ಯತೆ ನೀಡಿದರೆ ಆರೋಗ್ಯ ಜೀವನ ನಡೆಸಬಹುದು ಎಂದು ತಿಳಿಸಿದರು.

    ಮನೆಗಳ ಸುತ್ತಮುತ್ತಲಿನ ಪರಿಸರ ಹಾಳಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ. ಸ್ವಚ್ಛತೆಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಒತ್ತು ನೀಡಿದ್ದು, ಸ್ವಚ್ಛ ಭಾರತ ಅಭಿಯಾನದಂತಹ ಕಾರ್ಯಕ್ರಮ ರೂಪಿಸಿದ್ದಾರೆ ಎಂದು ತಿಳಿಸಿದರು.

    ನಗರದಲ್ಲಿ ಹಿಂದೆ ತಿಂಗಳಿಗೊಮ್ಮೆ ನೀರು ಬರುತ್ತಿತ್ತು. ಈಗ ವಾರಕ್ಕೊಮ್ಮೆ ನೀರು ಹರಿಯುತ್ತಿದೆ. ಮನೆಗಳ ಮುಂದೆ ಚರಂಡಿಗಳಿವೆ. ಅಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಶುಚಿತ್ವ ಕಾಪಾಡಿಕೊಳ್ಳುವುದು ಾಗರಿಕರ ಮುಂದಿರುವ ಸವಾಲು ಎಂದು ಹೇಳಿದರು.

    ಕಳೆದ ವರ್ಷ 436 ಡೆಂೆ ಪ್ರಕರಣ ವರದಿ: ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿ ಡಾ.ಬಿ.ಜಯಮ್ಮ ಮಾತನಾಡಿ, ಜಿಲ್ಲೆಯಲ್ಲಿ 2018ರಲ್ಲಿ 108 ಡೆಂೆ, 161 ಚಿಕೂನ್‌ಗುನ್ಯಾ ಪ್ರಕರಣ ವರದಿಯಾಗಿವೆ. 2019ರಲ್ಲಿ 436 ಡೆಂೆ ಹಾಗೂ 196 ಚಿಕೂನ್‌ಗುನ್ಯಾ ಪ್ರಕರಣ ದಾಖಲಾಗಿವೆ ಎಂದು ಮಾಹಿತಿ ನೀಡಿದರು.

    ನಗರಸಭೆ ಸದಸ್ಯೆ ಬಾಲಮ್ಮ, ಟಿಎಚ್‌ಒ ಡಾ.ಬಿ.ವಿ.ಗಿರೀಶ್, ನಗರ ಆರೋಗ್ಯ ಕೇಂದ್ರದ ಡಾ.ಮುಸ್ತಫಾ, ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ನಂದಿನಿ ಕಡಿ, ಖಾಸಿಮ್ ಸಾಬ್, ಅಬುಸ್ವಾಲೇಹ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts