More

    ಮೌಲ್ಯಮಾಪನ ಕೇಂದ್ರ ವಿಕೇಂದ್ರೀಕರಣಕ್ಕೆ ಉಪನ್ಯಾಸಕರ ಒತ್ತಾಯ

    ಚಿತ್ರದುರ್ಗ: ಕರೊನಾ ಭೀತಿ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿ ಜಿಲ್ಲೆಯ ಲ್ಲಿ ತೆರೆಯುವಂತೆ ಜಿಲ್ಲಾ ಉಪನ್ಯಾಸಕರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

    ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮೌಲ್ಯ ಮಾಪನಕ್ಕೆ ವ್ಯವಸ್ಥೆ ಮಾಡಿದೆ. ಆದರೆ ಈ ಸ್ಥಳಗಳಲ್ಲಿ ಸಾರಿಗೆ, ಊಟ, ವಸತಿಗೆ ತೊಂದರೆ ಎದುರಾಗಲಿದೆ. ಈ ಸಂದರ್ಭದಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ವಿಕೇಂದ್ರೀಕರಣಗೊಳಿಸಿ, ಉಪನ್ಯಾಸಕರು, ಪ್ರಾಚಾರ್ಯರಿಗೆ ನಿರಾಂತಕವಾಗಿ ಮೌಲ್ಯಮಾಪನ ಮಾಡಲು ಅವಕಾಶ ಮಾಡಿ ಕೊಡುವಂತೆ ಎಡಿಸಿ ಸಿ.ಸಂಗಪ್ಪ ಅವರಿಗೆ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

    ಸಂಘದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಣ, ಉಪಾಧ್ಯಕ್ಷ ಡಾ.ತಿಮ್ಮಣ್ಣ, ಪ್ರಾಚಾರ್ಯರ ಸಂಘದ ಅಧ್ಯಕ್ಷ ತಿಮ್ಮಯ್ಯ, ಸಹ ಕಾರ್ಯದರ್ಶಿ ನರ ಸಿಂಹಮೂರ್ತಿ,ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್,ವಸಂತಕುಮಾರ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ವೇದಮೂರ್ತಿ, ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts