More

    ಬಿ.ದುರ್ಗದಲ್ಲಿ ಕೋವಿಡ್-19 ಆಸ್ಪತ್ರೆ ಸಜ್ಜು

    ಚಿತ್ರದುರ್ಗ: ದೇಶಾದ್ಯಂತ ಹಬ್ಬಿರುವ ಕರೊನಾ ವೈರಾಣು ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಸೋಂಕು ತಗುಲಿದ ರೋಗಿಗಳ ಚಿಕಿತ್ಸೆಗಾಗಿ ಹೊಳಲ್ಕೆರೆ ತಾಲೂಕು ಬಿ.ದುರ್ಗದಲ್ಲಿ 30 ಹಾಸಿಗೆ ಸಾಮರ್ಥ್ಯ ಕೋವಿಡ್-19 ಆಸ್ಪತ್ರೆ ಸಜ್ಜಾಗಿದೆ.

    ಸುಸಜ್ಜಿತ ಕಟ್ಟಡ, ಪ್ರತ್ಯೇಕ ಶೌಚಗೃಹ ವ್ಯವಸ್ಥೆ, ಕುಡಿಯುವ ನೀರು, ಅಗತ್ಯ ಔಷಧೋಪಚಾರದ ಸೌಲಭ್ಯ ಹೊಂದಿರುವ ಸಮುದಾಯ ಆರೋಗ್ಯ ಕೇಂದ್ರವಿದು ಎಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ಹೇಳಿದರು.

    ಆರೋಗ್ಯ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಮಹಿಳೆಯರ ಮತ್ತು ಪುರುಷರ ಪ್ರತ್ಯೇಕ ವಾರ್ಡ್‌ಗಳನ್ನು ಪರಿಶೀಲಿಸಿ ಮಾತನಾಡಿ, ಹೊಳಲ್ಕೆರೆ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ಕಣಿವೆಯಲ್ಲಿ 2 ಕಡೆ 21 ಹಾಸಿಗೆ ಮತ್ತು ಎಸ್ಟಿ ಹಾಸ್ಟೆಲ್ ಚನ್ನಗಿರಿ ರಸ್ತೆಯಲ್ಲಿ 10 ಹಾಸಿಗೆಯು ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ ಎಂದರು.

    ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣ ಹಂತದಲ್ಲಿರುವ ಕಾರಣ, ಸಮೀಪದ ಬಿ.ದುರ್ಗ ಸಮುದಾಯ ಆರೋಗ್ಯ ಕೇಂದ್ರವನ್ನು ಆಯ್ದುಕೊಳ್ಳಲಾಗಿದೆ. ಶಿವಮೊಗ್ಗ ರಸ್ತೆ ಬಾಲಕರ ಮೆಟ್ರಿಕ್‌ಪೂರ್ವ ಹಾಸ್ಟೆಲ್‌ನಲ್ಲಿ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಜಯಸಿಂಹ, ತಹಸೀಲ್ದಾರ್ ಕೆ.ನಾಗರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಮೂಗಪ್ಪ ಮತ್ತು ಜಾನಕಿ, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಕ ಹನುಮಂತಪ್ಪ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಶಶಿಕಿರಣ್, ದಿವ್ಯ ಶ್ವೇತಾ, ಚೈತ್ರಾ ಮತ್ತು ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts