More

    ಅನಿಷ್ಠ ನಿರ್ಮೂಲನೆಗೆ ಶಿಕ್ಷಣವೇ ಅಸ್ತ್ರ

    ಚಿತ್ರದುರ್ಗ: ನಾಡಿನ ಎಲ್ಲ ದಾರ್ಶನಿಕರ ಆದರ್ಶಗಳು ಯುವ ಪೀಳಿಗೆಗೆ ಮಾರ್ಗದರ್ಶನ ಆಗುವಂತೆ ಶಿಕ್ಷಕರು, ಪಾಲಕರು, ಸಂಘ-ಸಂಸ್ಥೆ ಪದಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಡಿಡಿಪಿಐ ಕೆ.ರವಿಶಂಕರ ರೆಡ್ಡಿ ಹೇಳಿದರು.

    ವಿಮುಕ್ತಿ ವಿದ್ಯಾಸಂಸ್ಥೆ, ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಶಾಂತಿ ಸೌಹಾರ್ದ ವೇದಿಕೆಯಿಂದ ಬಾಲ್ಯವಿವಾಹ, ಬಾಲಕಾರ್ಮಿಕತೆ ಕುರಿತಂತೆ ಶಿಕ್ಷಕರು ಮತ್ತು ಮಾಧ್ಯಮದವರಿಗೆ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತಾಡಿದರು.

    ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಮೊದಲಾದ ಮಹನೀಯರು ಸಮಾಜದಲ್ಲಿರುವ ಬಡತನ, ಮೌಢ್ಯ ಇತ್ಯಾದಿ ಪಿಡುಗುಗಳನ್ನು ನಿವಾರಿಸಲು ಶ್ರಮಿಸಿದ್ದಾರೆ. ಶಿಕ್ಷಣದಿಂದ ಸಾಮಾಜಿಕ ಅನಿಷ್ಠಗಳನ್ನು ಹೋಗಲಾಡಿಸಲು ಸಾಧ್ಯ ಎಂಬ ಅರಿವು ಮೂಡಿಸಿದ್ದು, ಅವರ ಚಿಂತನೆಯನ್ನು ಅರಿತುಕೊಳ್ಳಬೇಕು ಎಂದರು.

    ಸರ್ವ ಶಿಕ್ಷಣ ಅಭಿಯಾನದ ಅಧಿಕಾರಿ ನಾಗಭೂಷಣ್ ಮಾತನಾಡಿ, ಶಿಕ್ಷಣ ಇಲಾಖೆ ಸತತವಾಗಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವಂತಹ ಪ್ರಯತ್ನ ನಡೆಸಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜಾಗೃತಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

    ವಿಮುಕ್ತಿ ವಿದ್ಯಾಸಂಸ್ಥೆ ನಿರ್ದೇಶಕ ಆರ್.ವಿಶ್ವಸಾಗರ್ ಮಾತನಾಡಿದರು. ಚಿತ್ರಡಾನ್‌ಬಾಸ್ಕೊ ಸಂಸ್ಥೆಯ ನಿರ್ದೇಶಕ ಫಾದರ್ ಸೋನಿಚಂದ್ ಮ್ಯಾಥ್ಯೂ, ಪತ್ರಕರ್ತರಾದ ನಿಶಾ, ನರೇನಹಳ್ಳಿ ಅರುಣ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು.

    ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಪ್ರಭಾಕರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಲಕ್ಷ್ಮಣ, ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಕೆ.ಶಂಕರಪ್ಪ, ಪತ್ರಕರ್ತರಾದ ಸಿದ್ದರಾಜು, ಪುಟ್ಟಸ್ವಾಮಿ, ಸಂಪಿಗೆ ತಿಪ್ಪೇಸ್ವಾಮಿ, ಕುಮಾರ್, ಅರಣ್ಯ ಸಾಗರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts