More

    ಕರೊನಾ ಭೀತೀಲಿ ರೋಗಗಳ ಕಡೆಗಣನೆ ಸಲ್ಲ

    ಚಿತ್ರದುರ್ಗ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಡೆಂೆ, ಚಿಕೂನ್‌ಗುನ್ಯಾ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕಾಗಿ ಸಮುದಾಯಕ್ಕೆ ಆರೋಗ್ಯ ಶಿಕ್ಷಣ ನೀಡಬೇಕೆಂದು ಡಿಸಿ ಆರ್.ವಿನೋತ್ ಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.

    ಡಿಸಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಅಂತರ್ ಇಲಾಖಾ ಸಮನ್ವಯ ಸಮಿತಿಯಲ್ಲಿ ಮಾತನಾಡಿ, ಕೋವಿಡ್-19 ಸೋಂಕು ನಿಯಂತ್ರಣಕ್ಕೆ ನಮ್ಮೆಲ್ಲರ ಗಮನವಿದ್ದು, ಜನರಿಗೆ ಮಾರಕವಾಗಬಹುದಾದ ಡೆಂೆ, ಚಿಕೂನ್‌ಗುನ್ಯಾ ನಿಯಂತ್ರಣ ನಿಟ್ಟಿನಲ್ಲಿ ನಿರ್ಲಕ್ಷ್ಯ ಸಲ್ಲದು ಎಂದು ಹೇಳಿದರು.

    ಕಳೆದ ವರ್ಷ 438 ಡೆಂೆ, 196 ಚಿಕೂನ್ ಗುನ್ಯಾ, 9 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದರೆ, ಕಳೆದ ವರ್ಷ ಏಪ್ರಿಲ್ ಅಂತ್ಯಕ್ಕೆ 17 ಡೆಂೆ, 22 ಚಿಕೂನ್‌ಗುನ್ಯಾ ಪ್ರಕರಣಗಳು ಕಂಡುಬಂದಿತ್ತು. ಆದರೆ, ಈ ವರ್ಷ ಏಪ್ರಿಲ್ ಅಂತ್ಯಕ್ಕೆ 124 ಡೆಂೆ, 54 ಚಿಕೂನ್ ಗುನ್ಯಾ, ಹಾಗೂ 3 ಮಲೇರಿಯಾ ವರದಿಯಾಗಿವೆ ಎಂದರು.

    ಚಿತ್ರದುರ್ಗ ತಾಲೂಕು ಒಂದರಲ್ಲೇ 91 ಡೆಂೆ, 42 ಚಿಕೂನ್ ಗುನ್ಯಾ ಪ್ರಕರಣ ಪತ್ತೆಯಾಗಿದ್ದು, ಮಳೆಗಾಲ ಆರಂಭವಾಗಿರುವುದರಿಂದ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಬಹುದು. ಈ ನಿಟ್ಟಿನಲ್ಲಿ ಹೈರಿಸ್ಕ್ ಏರಿಯಾಗಳೆಂದು ಗುರುತಿಸಿದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಹಂದಿಗಳ ಸ್ಥಳಾಂತರಕ್ಕೆ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಸೂಛಿಸಿದರು.

    ಜಿಲ್ಲಾ ಕೀಟಜನ್ಯ ರೋಗ ನಿಯಂತ್ರಣಾಧಿಕಾರಿ ಡಾ.ಬಿ.ಜಯಮ್ಮ ಮಾತನಾಡಿ, ಲಾರ್ವಾ ಸಮೀಕ್ಷೆ ಸಹಿತ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಎಚ್ಚರಿಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರಿಸಿದರು.

    ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ್, ತಾಲೂಕು ವೈದ್ಯಾಧಿಕಾರಿಗಳು, ತಹಸೀಲ್ದಾರ್‌ಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts