ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

ac prasanna
Published on

ಚಿತ್ರದುರ್ಗ: ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ(51) ಅಪಘಾತದಲ್ಲಿ ಮೃತಪಟ್ಟಿದ್ದು, ಇವರ ಅಂಗಾಂಗಗಳನ್ನು ಮೃತರ ಪತ್ನಿ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ನಗರದ ಗೊನೂರು ರಸ್ತೆಯಲ್ಲಿ ಪತ್ನಿ ಜತೆ ನಿನ್ನೆ(ಸೋಮವಾರ) ಬೆಳಗ್ಗೆ ಪ್ರಸನ್ನ ಅವರು ವಾಯವಿಹಾರಕ್ಕೆ ಹೋಗಿದ್ದರು. ಈ ವೇಳೆ ಯಮನಂತೆ ಬಂದ ಅಪರಿಚಿತ ಬೈಕ್​ ಪ್ರಸನ್ನ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತದಲ್ಲಿ ತಲೆ ಮತ್ತು ಕಾಲಿಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಪ್ರಸನ್ನರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ರವಾನಿಸಲಾಗಿತ್ತು.

ಇಂದು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಆಸ್ಪತ್ರೆಯಲ್ಲೇ ಪ್ರಸನ್ನ ಕೊನೆಯುಸಿರೆಳೆದಿದ್ದಾರೆ. ಪ್ರಸನ್ನರ ಪೂರ್ವ ಇಚ್ಛೆಯಂತೆ ಅಂಗಾಗ ದಾನ ಮಾಡಲಾಗಿದೆ. ಮೃತರಿಗೆ ಪತ್ನಿ ಸುಧಾ ಮತ್ತು ಪುತ್ರಿ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net