20.4 C
Bengaluru
Monday, January 20, 2020

ಎಲ್ಲೆಂದರಲ್ಲಿ ಬಸ್ ನಿಲ್ಲಿಸುವಂತಿಲ್ಲ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಚಿತ್ರದುರ್ಗ: ಒಂದು ತಿಂಗಳ ಒಳಗೆ ಶಿಸ್ತು ರೂಢಿಸಿಕೊಳ್ಳದಿದ್ದರೇ ಮೋಟಾರು ವಾಹನ ಕಾಯ್ದೆಯಡಿ ಭಾರೀ ದಂಡ, ಚಾಲನಾ ಪರವಾನಗಿ ಹಾಗೂ ಆರ್‌ಸಿ ರದ್ದು ಇತ್ಯಾದಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಡಿವೈಎಸ್ಪಿ ಸಂತೋಷ್ ಎಚ್ಚರಿಸಿದ್ದಾರೆ.

ಖಾಸಗಿ ಬಸ್ ಮಾಲೀಕರ ಸಂಘ, ಪೊಲೀಸ್ ಇಲಾಖೆ, ಸುಗಮ ಸಂಚಾರ ವ್ಯವಸ್ಥೆ ಕುರಿತಂತೆ ಎಪಿಎಂಸಿ ದಲ್ಲಾಲರ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಖಾಸಗಿ ಬಸ್ ಚಾಲಕರು, ಏಜೆಂಟರು ಹಾಗೂ ನಿರ್ವಾಹಕರ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ಪ್ರಯಾಣಿಕರು ಕೈ ಮಾಡಿದರೆಂದು ಖಾಸಗಿ ಬಸ್ಸುಗಳನ್ನು ನಗರದಲ್ಲಿ ಇನ್ನು ಎಲ್ಲೆಂದರಲ್ಲಿ ನಿಲ್ಲಿಸುವಂತಿಲ್ಲ ಎಂದು ಸೂಚಿಸಿದರು.

ಒಂದು ವೇಳೆ ನಿಲ್ಲಿಸಿದರೆ 1 ಸಾವಿರ ರೂ. ದಂಡ ಹಾಕಲಾಗುವುದು. ಒಂದು ತಿಂಗಳ ಕಾಲ ಬಸ್ಸುಗಳ ನಿಲುಗಡೆ ಕುರಿತಂತೆ ವಿಡಿಯೋ ಚಿತ್ರೀಕರಣದೊಂದಿಗೆ ಮಾಲೀಕರನ್ನು ಎಚ್ಚರಿಸಲಾಗುವುದು. ನಿರ್ಧಿಷ್ಟ ಪಡಿಸಿದ ನಿಲುಗಡೆ ಸ್ಥಳಗಳಲ್ಲಿ ಪ್ರಯಾಣಿಕರನ್ನು ಹತ್ತಿಸ ಬೇಕು ಅಥವಾ ಇಳಿಸಬೇಕು. ಮೀರಿದರೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದರು.

ಖಾಸಗಿ ಬಸ್‌ಗಳ ಸೇವೆ ಅತ್ಯಂತ ಉತ್ತಮ ಎನ್ನುವಂಥ ರೀತಿಯಲ್ಲಿ ನಿಮ್ಮ ವರ್ತನೆಗಳಿರಲಿ. ಖಾಸಗಿ ಬಸ್ ನಿಲ್ದಾಣದಲ್ಲಿ ಸಮಾಜ ಘಾತುಕ ಶಕ್ತಿಗಳು, ಚಟುವಟಿಕೆಗಳ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿ. ಸಂಚಾರಿ ಕಾಯ್ದೆಗಳನ್ನು ಚಾಚೂ ತಪ್ಪದೇ ಪಾಲಿಸಿ. ನಿಲ್ದಾಣದ ಸ್ವಚ್ಛತೆಗೂ ಸಹಕರಿಸುವಂತೆ ಕೋರಿದರು.

ಕೋಟೆ ಸಿಪಿಐ ಪ್ರಕಾಶ್ ಪಾಟೀಲ್ ಮಾತನಾಡಿ, ಐಎಂವಿ ಕಾಯ್ದೆ ತಿದ್ದುಪಡಿಯಿಂದಾಗಿ ಸಂಚಾರಿ ನಿಯಮಗಳ ಉಲ್ಲಂಘನೆಗೆ ವಿಧಿಸುತ್ತಿರುವ ಭಾರೀ ದಂಡ ಮೊದಲಾದ ಕಾನೂನು ಕ್ರಮಗಳನ್ನು ವಿವರಿಸಿದರು. ಮದ್ಯ ಸೇವಿಸಿ ಅಥವಾ ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸದಂತೆ ಮನವಿ ಮಾಡಿದರು.

ಬಸ್ ಮಾಲೀಕರ ಸಂಘದ ಮುಖಂಡರಾದ ಎಸ್‌ಎಂಎಲ್ ತಿಪ್ಪೇಸ್ವಾಮಿ, ಜಿ.ಬಿ.ಶೇಖರ್, ನಾಗರಾಜ್, ಚಾಲಕರ ಸಂಘದ ಅಧ್ಯಕ್ಷ ನಾಗರಾಜ್, ಸಂಚಾರಿ ಠಾಣೆ ಪಿಎಸ್‌ಐ ರೇವತಿ, ಬಡಾವಣೆ ಠಾಣೆ ಪಿಎಸ್‌ಐ ಪರಮೇಶ್ ಇದ್ದರು.

ಸಿಬ್ಬಂದಿ ನಡವಳಿಕೆ ಬದಲಾಗಬೇಕು: ಸ್ವಾತಂತ್ರೃ ಪೂರ್ವದಿಂದಲೂ ರಾಜ್ಯದಲ್ಲಿರುವ ಖಾಸಗಿ ಬಸ್ಸಿನ ಸೇವೆ ಕುರಿತಂತೆ ಈಗ ಅತೃಪ್ತಿ ಉಂಟಾಗಿದೆ ಎಂದರೆ ಅದಕ್ಕೆ ಸಿಬ್ಬಂದಿಯ ನಡವಳಿಕೆ ಕಾರಣ ಎಂದು ಸಂಘದ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ತಿಳಿಸಿದರು.

ಚಾಲಕರು, ನಿರ್ವಾಹಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಏಜೆಂಟರು ಪರವಾನಗಿ ಪಡೆದುಕೊಳ್ಳಬೇಕು. ಡಿಎಲ್ ಇಲ್ಲದೆ ಯಾರೂ ಬಸ್ ಚಲಾಯಿಸಬಾರದು. ಸಿಬ್ಬಂದಿ ಕ್ಷೇಮಾಭಿವೃದ್ಧಿ ಕುರಿತಂತೆ ನಮ್ಮ ಸಂಘವೇ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ನಿಲ್ದಾಣದಲ್ಲಿ ಸಮಾಜ ಘಾತುಕ ಶಕ್ತಿಗಳನ್ನು ನಿಯಂತ್ರಿಸಲು ಸಂಘದಿಂದ ಸಿಸಿ ಕ್ಯಾಮರಾ ಅಳವಡಿಸುವುದಾಗಿ ಹೇಳಿದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...