More

    ಬೇಡಿಕೆಗಳ ಈಡೇರಿಕೆಗೆ ಪಟ್ಟು

    ಚಿತ್ರದುರ್ಗ: ವಿವಿಧ 22 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಿನಗೂಲಿ ನೌಕರರು ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಧರಣಿ ನಡೆಸಿದರು.

    ರಾಜ್ಯ ದಿನಗೂಲಿ ನೌಕರರ ಮಹಾಮಂಡಲದ ಅಧ್ಯಕ್ಷ ಡಾ.ಕೆ.ಎಸ್.ಶರ್ಮಾ ನೇತೃತ್ವದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಫೆ.13ರೊಳಗೆ ಎಲ್ಲ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದರು.

    ರಾಜ್ಯ ಸರ್ಕಾರ ಇತ್ತೀಚೆಗೆ ಅರ್ಹರಿಗೆ ತುಟ್ಟಿಭತ್ಯೆ, ಮನೆ ಬಾಡಿಗೆ ಭತ್ಯೆ ಹೆಚ್ಚಿಸಿದ್ದರೂ ಸರ್ವೋಚ್ಛ ನ್ಯಾಯಾಲಯ ತೀರ್ಪಿನಂತೆ ಶೇ.100 ಭತ್ಯೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

    ಸೇವೆ ಕಾಯಂ ಸೇರಿ ನಾನಾ ಬೇಡಿಕೆಗಳನ್ನು ಕೂಡಲೇ ಈಡೇರಿಸದಿದ್ದರೆ ಮಾರ್ಚ್ 11ರಿಂದ ಬೆಂಗಳೂರಲ್ಲಿ 3 ದಿನಗಳ ಕಾಲ ಪ್ರತಿಭಟನೆ ನಡೆಸುವುದಾಗಿ ತಿಳಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    ಮಹಾಮಂಡಲ ಜಿಲ್ಲಾಧ್ಯಕ್ಷ ಟಿ.ಜಿ.ಯಶವಂತರಾಜು, ಉಪಾಧ್ಯಕ್ಷ ಆರ್.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ಆರ್.ಜಯಪ್ರಕಾಶ್, ತಾತಯ್ಯ, ವಿವೇಕಾನಂದ ಹಾಗೂ ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ ಮತ್ತು ದಿನಗೂಲಿಯಿಂದ ಸೇವೆ ಕಾಯಂ ಗೊಂಡಿರುವ ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts