More

  ತಂಬಾಕು, ಮಾದಕ ವಸ್ತುಗಳ ಮಾರಾಟವಿಲ್ಲ

  ಚಿತ್ರದುರ್ಗ: ಜಿಲ್ಲೆಯ ಶಾಲಾ ಕಾಲೇಜು ಸಮೀಪ ತಂಬಾಕು ಹಾಗೂ ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

  ಮಾದಕ ವಸ್ತುಗಳ ಮಾರಾಟ ತಡೆ ಕುರಿತು ಡಿಸಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಶಾಲಾ ಕಾಲೇಜುಗಳ ಕ್ಯಾಂಪಸ್ ಆವರಣದಲ್ಲಿ ಗಾಂಜಾ, ಅಫೀಮು ಸೇರಿ ಮಾದಕ ವಸ್ತುಗಳ ಮಾರಾಟ ಕುರಿತ ಮಾಹಿತಿ ಇದ್ದಲ್ಲಿ ಪೊಲೀಸರ ಗಮನಕ್ಕೆ ತರಬೇಕೆಂದು ಸಾರ್ವಜನಿಕರಿಗೆ ವಿನಂತಿಸಿದರು.

  ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರ ಬಿ.ಎಂ ಪ್ರಭುದೇವ್ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೂ 40 ಪ್ರದೇಶಗಳಲ್ಲಿ ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿ, 7125 ರೂ. ದಂಡ ವಸೂಲಿ ಮಾಡಲಾಗಿದೆ. ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಲಾಗಿದೆ. ಜಿಲ್ಲೆಯ 37 ಶಾಲೆಗಳನ್ನು ತಂಬಾಕು ಮುಕ್ತ ಶಾಲೆ ಎಂದು ಘೋಷಿಸಲಾಗಿದೆ ಎಂದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts