ಚಿತ್ರದುರ್ಗ: ಜಿಲ್ಲಾಸ್ಪತ್ರೆ ಮತ್ತು ಬೆಂಗಳೂರಿನ ವಿಠಲ ನೇತ್ರ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಮಧುಮೇಹ ರೋಗದಿಂದ ಕಣ್ಣಿಗೆ ತೊಂದರೆ ಇರುವ ರೋಗಿಗಳಿಗೆ ಜ.9ರಂದು ಲೇಸರ್ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತದೆ.
ಜ.7ರೊಳಗೆ ಜಿಲ್ಲಾ ಆಸ್ಪತ್ರೆಯ ನೇತ್ರ ವಿಭಾಗದಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ್ ತಿಳಿಸಿದ್ದಾರೆ.