More

    ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ 29 ರಂದು ಟಿಇಟಿ ಪರೀಕ್ಷೆ

    ಚಿತ್ರದುರ್ಗ: ಜಿಲ್ಲೆಯಲ್ಲಿ ಮಾ.29 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳಾಗಬಾರ ದೆಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪರೀಕ್ಷೆ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾ.15 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು 29 ಕ್ಕೆ ಮುಂದೂಡಲಾಗಿದೆ. 1 ರಿಂದ 5ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಅಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 2513 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ.

    6 ರಿಂದ 8 ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಮಧ್ಯಾಹ್ನ 2 ರಿಂದ 4.30 ರವರೆಗೆ 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7022 ಅಭ್ಯರ್ಥಿಗಳಿದ್ದಾರೆ. ಪರೀಕ್ಷೆ ಆರಂಭದ ಅರ್ಧ ಗಂಟೆ ಮುಂಚಿತವಾಗಿ ಅಭ್ಯರ್ಥಿಗಳಿಗೆ ಕೇಂದ್ರಕ್ಕೆ ಪ್ರವೇಶ ಕಲ್ಪಿಸಬೇಕು. ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ 1 ಗಂಟೆ ಮುಂಚಿತವಾಗಿ ಹಾಜರಿರಬೇಕು ಎಂದರು.

    ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಮಾತನಾಡಿ, ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಲುಪಿಸಬೇಕು. ಪರೀಕ್ಷಾ ನಂತರ ಉತ್ತರ ಪತ್ರಿಕೆ ಹಾಗೂ ಗೌಪ್ಯ ಸಾಮಗ್ರಿಗಳನ್ನು ಮುಖ್ಯಅಧೀಕ್ಷಕರಿಂದ ಹಿಂಪಡೆದು ಖಜಾನೆಗೆ ಸಲ್ಲಿಸಲು 11 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

    ಬಿಇಒಗಳಾದ ಬಿ.ಸಿದ್ದಪ್ಪ, ಜಯಪ್ಪ, ಇನ್ಸ್‌ಪೆಕ್ಟರ್ ಮೃತ್ಯುಂಜಯ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಶಿಕ್ಷಣ ಇಲಾಖೆ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts