More

    ಶಾಸಕ ಸ್ಥಾನದಿಂದ ಯತ್ನಾಳ್ ವಜಾಕ್ಕೆ ಪಟ್ಟು

    ಚಿತ್ರದುರ್ಗ: ಹಿರಿಯ ಸ್ವಾತಂತ್ರೃ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಸಮಿತಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

    ಪ್ರಮುಖ ರಸ್ತೆಯಲ್ಲಿ ಯತ್ನಾಳ್ ವಿರುದ್ಧ ಘೋಷಣೆ ಹಾಕುತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘದ ಪದಾಧಿಕಾರಿಗಳು, ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

    ಮತ್ತೊಬ್ಬರ ಚಾರಿತ್ರೃ ವಧೆ ಮಾಡುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಜರುಗಿಸಬೇಕು. ಮಾನನಷ್ಟ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.

    ದೊರೆಸ್ವಾಮಿ ನಕಲಿ ಸ್ವಾತಂತ್ರೃ ಹೋರಾಟಗಾರ. ಈ ಹೇಳಿಕೆಗೆ ತಾವು ಬದ್ಧ ಎಂದು ವಿಜಯಪುರದಲ್ಲಿ ಮತ್ತೊಮ್ಮೆ ಸಮರ್ಥನೆ ನೀಡಿರುವ ಯತ್ನಾಳ್, ಕನಿಷ್ಠ ಒಂದು ವರ್ಷ ದೊರೆಸ್ವಾಮಿಯವರ ಜೀವನಶೈಲಿ ಅಳವಡಿಸಿಕೊಂಡು ಬದುಕಿ ತೋರಿಸಲಿ. ಆಗಲಾದರೂ ತಮ್ಮ ಹೇಳಿಕೆಗೆ ಪಶ್ಚಾತ್ತಾಪ ಆಗಬಹುದು.

    ಯತ್ನಾಳ್ ರೀತಿಯಲ್ಲೇ ವಿ.ಸೋಮಣ್ಣ, ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ ಹೀಗೆ ಅನೇಕ ನಾಯಕರು ತಮ್ಮ ವ್ಯಾಪ್ತಿ ಮೀರಿ ನಾಲಿಗೆ ಹರಿಬಿಡುತ್ತಿದ್ದಾರೆ. ಸಿಎಂ ಅವರಿಗೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈ ಮೀರಲಿದೆ ಎಂದು ಎಚ್ಚರಿಸಿದರು. ಬಳಿಕೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

    ರಾಜ್ಯ ಪ್ರಧಾನ ಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ರಾಜ್ಯಪಾಲರು, ವಿಧಾನಸಭೆ ಅಧ್ಯಕ್ಷರು ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಬೇಕು. ರಾಜ್ಯ ಸರ್ಕಾರ ತಕ್ಷಣ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರತೆ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು.

    ರೈತಸಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ, ಜಿಲ್ಲಾಧ್ಯಕ್ಷ ಜಿ.ಕೆ.ನಾಗರಾಜ್, ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಬಿ.ಇ.ಮಂಜುನಾಥ್, ಕೆ.ಸಿ.ಪರಮೇಶ್ವರಪ್ಪ, ಜಿ.ಆರ್.ಜಯಪ್ಪ, ಡಿ.ರಂಗನಾಥ್, ಎಂ.ಸದಾಶಿವಪ್ಪ, ಜಿ.ರಮೇಶ್ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts