30ಕ್ಕೆ ಮಳೆ ನೀರು ಕೊಯ್ಲು ಕಾರ್ಯಾಗಾರ

ಚಿತ್ರದುರ್ಗ: ಕರ್ನಾಟಕ ಬರಮುಕ್ತ ಆಂದೋಲನ ಸಮಿತಿಯಿಂದ ನಗರದ ಮುರುಘಾ ಮಠದಲ್ಲಿ ಜೂ.30ರಂದು ಮಳೆನೀರು ಕೊಯ್ಲು, ಕೊಳವೆ ಬಾವಿಗಳ ಮರುಪೂರಣ ಕುರಿತಂತೆ ಒಂದು ದಿನದ ವಿಶೇಷ ಕಾರ್ಯಾಗಾರ ಆಯೋಜಿಸಿದೆ.

ವಕೀಲ ಪ್ರೊ.ರವಿವರ್ಮಕುಮಾರ್, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಡಾ.ಆರ್.ಆರ್.ಸಾಹುಕಾರ್, ಡಾ.ಲಿಂಗರಾಜು,ಪ್ರೊ.ಮಹಾಲಿಂಗಯ್ಯ ಮೊದಲಾದ ತಜ್ಞರು ಭಾಗವಹಿಸಲಿದ್ದಾರೆ.

ಈ ಕಾರ್ಯಾಗಾರ ಕುರಿತಂತೆ ಶ್ರೀ ಶಿವಮೂರ್ತಿ ಮುರುಘಾ ಶರಣರ ಸಾನ್ನಿಧ್ಯದಲ್ಲಿ ಸೋಮವಾರ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಕಾರ್ಯದರ್ಶಿ ಮಂಜುನಾಥ್, ಚಿಕ್ಕಕಬ್ಬಿಗೆರೆ ನಾಗರಾಜ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಧನಂಜಯ್, ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾ ನಿರ್ದೇಶಕರಾದ ಡಾ.ಈ.ಚಿತ್ರಶೇಖರ್, ಕಾರ್ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ ಇದ್ದರು.

Leave a Reply

Your email address will not be published. Required fields are marked *