ಕಲಿಕೆಗೆ ಮೊದಲ ಆದ್ಯತೆ ನೀಡಿ

ಚಿತ್ರದುರ್ಗ: ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಗಮನ ಹರಿಸಬೇಕು ಎಂದು ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ.ಎಂ.ಬಸವರಾಜಪ್ಪ ಕಿವಿಮಾತು ಹೇಳಿದರು.

ನಗರದ ಸ್ನಾತಕೋತ್ತರ ಗಣಿತ ಶಾಸ್ತ್ರ ವಿಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ನೆನಪುಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಯ ವ್ಯರ್ಥ ಮಾಡದೇ ಓದಿದರೆ ಭವಿಷ್ಯ ಚೆನ್ನಾಗಿರುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಕಾಲದ ಜತೆ ಹೆಜ್ಜೆ ಹಾಕಬೇಕು. ಆಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದರು.

ಐಕ್ಯೂಎಸಿ ಸಂಚಾಲಕ ಡಾ.ಕೆ.ಕೆ.ಕಮಾನಿ ಮಾತನಾಡಿ, ದೇಶದ ಪ್ರಗತಿ ಶಿಕ್ಷಣದಿಂದ ಮಾತ್ರ ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಕಾಲಹರಣ ಮಾಡದೇ ಉತ್ತಮ ಶಿಕ್ಷಣ ಪಡೆದು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಹೇಳಿದರು.

ರ‌್ಯಾಂಕ್ ವಿದ್ಯಾರ್ಥಿಗಳಾದ ಲಲಿತಾ, ಪರಮೇಶ್ವರಪ್ಪ, ನಿಶಾ ಫಾತಿಮಾ, ರೋಜಾ ಅವರನ್ನು ಸನ್ಮಾನಿಸಲಾಯಿತು. ವಿಭಾಗದ ಮುಖ್ಯಸ್ಥ ಡಾ.ಪಿ.ಟಿ.ಮಂಜುನಾಥ್, ಡಾ.ಎನ್.ಬಿ.ಗಟ್ಟಿ, ಡಾ.ಸತೀಶ್, ಡಾ.ವಿಶಾಲಾಕ್ಷಿ ಉಪಸ್ಥಿತರಿದ್ದರು.