More

    ಸ್ವಾಸ್ಥೃ ಸಮಾಜಕ್ಕೆ ಶಿಕ್ಷಣ ಸಹಕಾರಿ

    ಚಿತ್ರದುರ್ಗ: ಹಿರಿಯರನ್ನು ಗೌರವಿಸುವ ಗುಣದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವೃದ್ಧಿಗೆ ಸಹಕಾರಿ ಆಗಲಿದೆ ಎಂದು ಜಿಪಂ ಸದಸ್ಯೆ ರಾಜೇಶ್ವರಿ ಹೇಳಿದರು.

    ನಗರದ ಎಸ್‌ಜೆಎಂ ಮಹಿಳಾ ಮಹಾವಿದ್ಯಾಲಯ ಹಾಗೂ ದಾವಣಗೆರೆ ವಿವಿ ಸಹಯೋಗದಲ್ಲಿ ಮರಡಿಹಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

    ವಿದ್ಯಾರ್ಥಿಗಳು ಹಿರಿಯರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು. ಶಿಕ್ಷಣದಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ನಮ್ಮಲ್ಲಿನ ಸೋಮಾರಿತನ ಹೋಗಲಾಡಿಸುವ ಸಲುವಾಗಿ ಇಂತಹ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

    ನಿವೃತ್ತ ಪ್ರಾಚಾರ್ಯ ಪ್ರೊ.ಡಿ.ಜಯಣ್ಣ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಶಿಬಿರ ದಾರಿ ಮಾಡಿಕೊಡುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಮಹಾತ್ಮ ಗಾಂಧೀಜಿ ಅವರ ಕನಸಿನ ಕೂಸು ಎಂದು ತಿಳಿಸಿದರು.

    ದಾವಣಗೆರೆ ವಿಶ್ವವಿದ್ಯಾಲಯದ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರಗಳಲ್ಲಿ ಭಾಗವಹಿಸಿದ್ದಾರೆ. ಜ್ಞಾನ ವಿಕಸನದೊಟ್ಟಿಗೆ ಸಾಮಾಜಿಕ, ಸಾಂಸ್ಕತಿಕ ಪರಿಸರ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ಸನ್ಮಾನ ಸ್ವೀಕರಿಸಿದ ನಿವೃತ್ತ ಪ್ರಾಚಾರ್ಯ ಗೋವಿಂದರೆಡ್ಡಿ ಮಾತನಾಡಿ, ಮನುಷ್ಯ ಜೀವನ ಅತ್ಯಂತ ಶ್ರೇಷ್ಠವಾದದು. ಅಸೂಯಪಡದೆ ಸಹನೆ ರೂಢಿಸಿಕೊಂಡು ಸಾರ್ಥಕ ಬದುಕನ್ನು ನಡೆಸಬೇಕು ಎಂದರು.

    ಎಸ್‌ಜೆಎಂ ಮಹಿಳಾ ಕಾಲೇಜಿನ ಪ್ರಾಚಾರ್ಯ ಪ್ರೊ.ಸಿ.ಬಸವರಾಜಪ್ಪ ಮಾತನಾಡಿದರು. ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಮಕ್ಸೂದ್ ಅಹಮದ್, ಪಿ.ಟಿ.ನಾಗರಾಜ, ನಾಗಪ್ಪ, ಜಿ.ಎಸ್.ನಾಗರಾಜ್ ಮತ್ತಿತರರು ಇದ್ದರು. ಸುಪ್ರಿತಾ ಪ್ರಾರ್ಥಿಸಿದರು. ಧನ್ಯಾ ಸ್ವಾಗತಿಸಿದರು. ಶ್ವೇತಾ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts