More

    ಸರ್ಕಾರದಲ್ಲಿ ಪರಸ್ಪರ ತಾಳ ಮೇಳ ಇಲ್ಲ

    ಚಿತ್ರದುರ್ಗ: ಲಾಕ್‌ಡೌನ್‌ನ ಸಂಕಷ್ಟದ ಈ ಸಮಯದಲ್ಲಿ ನರೇಗಾ ಜಾಬ್‌ಕಾರ್ಡ್ ಕೂಲಿ ಕಾರ್ಮಿಕರಿಗೆ 40 ದಿನಗಳ ವೇತನ ಬಿಡುಗಡೆ ಮಾಡುವಂತೆ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯಲ್ಲಿರುವ 8.50 ಲಕ್ಷ ಕೋಟಿ ರೂ. ಸೆಸ್ ಮೊತ್ತವನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಬೇಕು ಎಂದು ರಾಜ್ಯ ಸರ್ಕಾರವನ್ನು ಕೋರಿದರು.

    ಮಾರುಕಟ್ಟೆ ಇಲ್ಲದೆ ಬೆಳೆ ನಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ಸರ್ಕಾರಗಳು ಕೂಡಲೇ ಧಾವಿಸಬೇಕು. ರೈತರ ಬಳಿ ಇರುವ ಎಲ್ಲ ಬೆಳೆಗಳನ್ನು ಸರ್ಕಾರವೇ ಖರೀದಿಸಬೇಕು. ಮುಂಗಾರು ಕೃಷಿಗೆ ಕೂಡಲೇ ಹೊಸ ಸಾಲ ವಿತರಿಸಬೇಕು. ಪ್ರಧಾನಿ ಮನಮೋಹನ್‌ಸಿಂಗ್ ಅವಧಿ ಕೇಂದ್ರ ಸರ್ಕಾರ 74 ಸಾವಿರ ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿತ್ತು. ಆದರೆ, ಈಗಿನ ಸರ್ಕಾರ ಉದ್ಯಮಿಗಳ 68607 ಕೋಟಿ ರೂ. ಸಾಲ ಮನ್ನಾ ಮಾಡಿದೆ. ಬರಪೀಡಿತ ಚಿತ್ರದುರ್ಗ ಜಿಲ್ಲೆ ಜನರ ನೆರವಿಗೆ ರಾಜ್ಯ ಅಥವಾ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಬಂದಿಲ್ಲ ಎಂದು ದೂರಿದರು.

    ಕರೊನಾ ಸಂಕಷ್ಟ ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಪ್ರತಿಪಕ್ಷಗಳು ಕೈ ಜೋಡಿಸಿವೆ. ಸೋಂಕು ಹತೋಟಿ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಬಿ.ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿಕೆಗಳ ನಡುವೆ ತಾಳ ಮೇಳವಿಲ್ಲವಾಗಿದೆ ಎಂದು ಹೇಳಿದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಮಾಜಿ ಶಾಸಕ ಎ.ವಿ.ಉಮಾಪತಿ, ಮುಖಂಡರಾದ ಹನುಮಲಿ ಷಣ್ಮುಖಪ್ಪ, ಬಿ.ಟಿ.ಜಗದೀಶ್, ಮಹಡಿ ಶಿವಮೂರ್ತಿ, ಸಿ.ಶಿವುಯಾದವ್, ಡಿ.ಎನ್.ಮೈಲಾರಪ್ಪ, ಎನ್.ಡಿ.ಕುಮಾರ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೋಹಿದ್ದಿನ್ ಚೋಟು, ಯುವ ಘಟಕದ ನಗರಾಧ್ಯಕ್ಷ ಅಸ್ಗರ್ ತಾಹೀರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts