More

    ಸರ್ಕಾರಗಳಿಂದ ರೈತರ ಬೆನ್ನಿಗೆ ಚೂರಿ

    ಚಿತ್ರದುರ್ಗ: ನಗರಕ್ಕೆ ಹೊಂದಿಕೊಂಡಿರುವ ಮೆದೇಹಳ್ಳಿ ಗ್ರಾಮದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಘಟಕಕ್ಕೆ ಮಂಗಳವಾರ ರಾಜ್ಯರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಅವರು, ರಾಜಕಾರಣಿಗಳ ಮಾತಿಗೆ ಮರುಳಾಗಿ ಹೆಗಲ ಮೇಲಿನ ಶಾಲು ತೆಗೆಯಬೇಡಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಬೆನ್ನಿಗೆ ಚೂರಿ ಹಾಕುತ್ತಿವೆ. ಸಂಘಟಿತ ಹೋರಾಟ ಅನಿವಾರ‌್ಯ. ನಿರಂತರ ಹೋರಾಟದ ಫಲವಾಗಿ ರೈತರ ಮನೆಗಳ ಜಪ್ತು ನಿಂತಿದೆ. ನೀರಾವರಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕೈ ಬಿಡಲಾಗಿದೆ ಎಂಬುದನ್ನು ನೆನಪಿಸಿಕೊಳ್ಳ ಬೇಕೆಂದರು.

    ರೈತ ಸಂಘದ ರಾಜ್ಯಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕರಪ್ಪ ಮಾತನಾಡಿ, ಹೋರಾಟದಿಂದಾಗಿ ಕೇಂದ್ರ ಸರ್ಕಾರ ಆರ್‌ಸಿಇ ಒಪ್ಪಂದದಿಂದ ಹಿಂದೆ ಸರಿಯಿತು. ಈ ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರು, ಒಬ್ಬ ಸಂಸದರಿದ್ದರೂ ರೈತರ ಪರವಾಗಿ ಮಾತನಾಡುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

    ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‌ಬಾಬು ಮಾತನಾಡಿ, ಸರ್ಕಾರಗಳು ಭವಿಷ್ಯದಲ್ಲಿ ಭೂಮಿಯನ್ನು ಬಲವಂತವಾಗಿ ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ನೀಡಿದರೆ ಅಚ್ಚರಿ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

    ರೈತ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಸಂಘದ ತಾಲೂಕು ಅಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಮುಖಂಡರಾದ ಆರ್.ಬಿ.ನಿಜಲಿಂಗಪ್ಪ, ಸಿ.ಆರ್.ತಿಮ್ಮಣ್ಣ, ಸಿ.ನಾಗರಾಜ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಎಂ.ಬಿ.ತಿಪ್ಪೇಸ್ವಾಮಿ, ಲಕ್ಷ್ಮೀ ನರಸಿಂಹ ಸ್ವಾಮಿ, ರೇವಣ್ಣ ಮತ್ತಿತರರು ಇದ್ದರು.

    ಮೆದೇಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts