More

    ವಿಜ್ಞಾನ ವಿಷಯ ಕನ್ನಡದಲ್ಲಿ ಬೋಧನೆ

    ಚಿತ್ರದುರ್ಗ: ಮುಂದಿನ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ 21 ಸರ್ಕಾರಿ ಪ.ಪೂ.ಕಾಲೇಜುಗಳಲ್ಲಿ ಕನ್ನಡದಲ್ಲಿ ವಿಜ್ಞಾನ ವಿಷಯ ಬೋಧನೆಗೆ ಅಗತ್ಯ ಕ್ರಮ ಕೈ ಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ವಿನೋತ್‌ಪ್ರಿಯಾ, ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

    ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಷಯವನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಅವಕಾಶಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

    ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವವಿಜ್ಞಾನ, ಭೂ ವಿಜ್ಞಾನದಂತಹ ವಿಷಯಗಳನ್ನು ಇಂಗ್ಲೀಷ್‌ನಲ್ಲಿ ಓದಲು ಕಾಲೇಜುಗಳಲ್ಲಿ ಅವಕಾಶವಿದೆ. ಕನ್ನಡದಲ್ಲಿ ವಿಜ್ಞಾನ ಓದಲು ವಿದ್ಯಾರ್ಥಿಗಳು ಇಚ್ಛಿಸಿದರೆ ಅವರಿಗೆ ನಿರಾಶೆ ಆಗುವುದು ಬೇಡ ಎಂದರು.

    ಮೆಡಿಕಲ್ ಓದ ಬಯಸುವ ವಿದ್ಯಾರ್ಥಿಗಳ ನೀಟ್ ಪ್ರವೇಶ ಪರೀಕ್ಷೆ, ಐಎಎಸ್, ಐಪಿಎಸ್ ಸೇರಿ ಹಲವು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಕನ್ನಡದಲ್ಲೇ ಇರುತ್ತವೆ. ಈ ಕುರಿತಂತೆ ಪೂರಕವಾಗಿ ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಲ್ಲಿ ಓದುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಮಾಹಿತಿ ತಲುಪಿಸಬೇಕು ಎಂದು ಸೂಚಿಸಿದರು.

    ಡಿಡಿಪಿಐ ಕೆ.ರವಿಶಂಕರರೆಡ್ಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ನಾಗರಾಜಪ್ಪ ಮತ್ತಿತರ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts