ಕ್ಷಯರೋಗ ಪತ್ತೆ ಅಭಿಯಾನ

ಚಿತ್ರದುರ್ಗ: ನಗರದ ಜಿಲ್ಲಾ ಆರೋಗ್ಯ ಇಲಾಖೆ ಆವರಣದಲ್ಲಿ ಸೋಮವಾರ ಡಿಎಚ್‌ಒ ಡಾ.ಪಾಲಾಕ್ಷ ಸಕ್ರಿಯ ಕ್ಷಯ ರೋಗ ಪತ್ತೆ ಅಭಿಯಾನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿ, ಜಿಲ್ಲಾದ್ಯಂತ ಜು.27ರ ವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ್ಷಯರೋಗ ತಗಲುವ ಸಾಧ್ಯತೆ ಹೆಚ್ಚಿರುವ ಪ್ರದೇಶಗಳಲ್ಲಿ ಆರೋಗ್ಯ ತಂಡಗಳು ಮನೆ ಮನೆಗೆ ತೆರಳಿ ಮಾಹಿತಿ ಮತ್ತು ಜನ ಜಾಗೃತಿ ಮೂಡಿಸಲಿವೆ ಎಂದರು.

ರೋಗವನ್ನು ದೂರವಿರಿಸಿ, ರೋಗಿಯನ್ನಲ್ಲ ಎನ್ನುವ ಘೋಷಣೆಯೊಂದಿಗೆ ನಗರದಲ್ಲಿ ಜಾಗೃತಿ ಜಾಥಾ ಸಾಗಿತು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ರಂಗನಾಥ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಕಾಂಬ್ಳಿಮಠ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಡಾ.ಮಂಜುನಾಥ ಸ್ವಾಮಿ, ಡಾ.ಸುರೇಂದ್ರ, ಡಾ.ಮುಸ್ತಫಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಖಾಸಿಂ ಸಾಬ್, ಮುಗಪ್ಪ, ಹನುಮಂತಪ್ಪ, ಗಂಗಾಧರ್ ಇತರರಿದ್ದರು.

Leave a Reply

Your email address will not be published. Required fields are marked *