ಮನೆ ಯಲ್ಲಿಯೇ ಮತದಾನ 3,5 ರಂದು

blank
blank

ಚಿತ್ರದುರ್ಗ: ಮನೆ ಯಲ್ಲಿಯೇ ಮತದಾನ ಮಾಡಲು 80 ವರ್ಷ ಮೇಲ್ಪಟ್ಟ 203, ಅಂಗವಿಕಲ 50 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಕ್ಷೇತ್ರ ಚುನಾವಣಾಧಿಕಾರಿ ಆರ್. ಚಂದ್ರಯ್ಯ ತಿಳಿಸಿದ್ದಾರೆ.

ಇಲ್ಲಿಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 3 ಮತ್ತು 5ರಂದು ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಚುನಾವಣಾ ಸಿಬ್ಬಂದಿ ಮನೆ ಮನೆಗೆ ತೆರಳಿ ಮತದಾನ ಮಾಡಿಸಲಿದ್ದಾರೆ.

ಈ ವೇಳೆ ಮತಗಟ್ಟೆ ಏಜೆಂಟರು ಹಾಜರಿರಬೇಕು. ಅಭ್ಯರ್ಥಿಗಳ ಚುನಾವಣಾ ಏಜೆಂಟರ್, ಇದಕ್ಕಾಗಿ ನೇಮಕಗೊಂಡವರ ನೇಮಕಾತಿ ಪಟ್ಟಿಯನ್ನು ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ

ಈ ದಿನಗಳಂದು ಏಜೆಂಟರ್‌ಗಳು ಹಾಜರಾಗದಿದ್ದರೂ ಮತದಾನ ಪ್ರಕ್ರಿಯೆ ನಿಗದಿತ ಸಮಯದಲ್ಲಿ ನಡೆಯಲಿದೆ. ಇದಕ್ಕಾಗಿ 16 ಸೆಕ್ಟರ್ ತಂಡ ರಚಿಸಲಾಗಿದೆ.

ಪ್ರತಿ ತಂಡದಲ್ಲಿ ಒಬ್ಬ ಸೆಕ್ಟರ್ ಅಧಿಕಾರಿ, ಇಬ್ಬರು ಮತಗಟ್ಟೆ ಅಧಿಕಾರಿ, ಮೈಕ್ರೋ ಅಬ್ಸರ್‌ವರ್, ವಿಡಿಯೋ ಗ್ರಾಫರ್, ಪೊಲೀಸ್ ಸಿಬ್ಬಂದಿ ಇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ತಂಡಗಳು ಅಂಚೆ ಮತ ಪತ್ರದ ಮೂಲಕ ಚುನಾವಣೆಯ ಎಲ್ಲಾ ನಿಯಮ ಮತ್ತು ಗೌಪ್ಯತೆ ಪಾಲಿಸಿ ಮತ ಚಲಾಯಿಸಲು ಅವಕಾಶ ನೀಡಲಿದ್ದಾರೆ. 3ರಂದು ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗದಿದ್ದಲ್ಲಿ 5ರಂದು ಕೂಡ ಅವಕಾಶವಿದೆ ಎಂದು ತಿಳಿಸಿದ್ದಾರೆ.

Share This Article

ಮಳೆಗಾಲದಲ್ಲಿ ಈ ಆಹಾರಗಳಿಂದ ದೂರವಿರಿ..ಇಲ್ಲದಿದ್ದರೆ ಅಪಾಯ ಖಂಡಿತ! Monsoon

Monsoon: ಮಳೆಗಾಲದಲ್ಲಿ ಹವಾಮಾನದ ಬದಲಾವಣೆಯೂ ಆಹಾರದಲ್ಲಿನ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಸೂಕ್ಷ್ಮಜೀವಿಗಳ ಬೆಳವಣಿಗೆಗೆ ಸೂಕ್ತವಾದ ವಾತಾವರಣವನ್ನು…

ವಾಲ್ನಟ್ಸ್ ತಿನ್ನಲು ಸರಿಯಾದ ಸಮಯ, ದಿನಕ್ಕೆ ಎಷ್ಟು Walnuts ತಿನ್ನಬಹುದು ಗೊತ್ತಾ?

Walnuts: ವಾಲ್ನಟ್ಸ್ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಪ್ರತಿದಿನ ಸೇವಿಸಬಹುದಾದ ಸೂಪರ್ ನಟ್ ಆಗಿದೆ. ಅವು…