26.8 C
Bangalore
Friday, December 13, 2019

ಶಿಶು ಮರಣ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸೂಚನೆ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಚಿತ್ರದುರ್ಗ: ನವಜಾತ ಶಿಶುಗಳ ಮರಣ ಪ್ರಮಾಣ ತಗ್ಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಸಿ ಆರ್.ವಿನೋತ್ ಪ್ರಿಯಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿ, ಹೆರಿಗೆ ವೇಳೆ ಹಾಗೂ ನಂತರದಲ್ಲಿ, ತಾಯಿ, ಶಿಶುವಿನ ಆರೋಗ್ಯ ಕಾಪಾಡಲು ಕಾಳಜಿ ವಹಿಸಬೇಕು ಎಂದರು.

ಬಾಣಂತಿಯರ ಆರೈಕೆಗೆ ಆಪ್ತ ಸಮಾಲೋಚನೆ ಹಾಗೂ ಎಎನ್‌ಎಂ ಮೂಲಕ ತಾಯಿ, ಮಗುವಿನ ಆರೋಗ್ಯ ವರದಿ ಪಡೆಯುವಂತೆ ಡಿಎಚ್‌ಒಗೆ ಸೂಚಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿರುವ ಹೆರಿಗೆ ಪ್ರಮಾಣವನ್ನು ತಗ್ಗಿಸುವ ಮೂಲಕ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆ ಮಾಡಬೇಕು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆರಿಗೆ ಮಾಡಿಸಲು ವ್ಯವಸ್ಥೆಯಾಗಬೇಕು. ಈಗಾಗಲೇ 24/7 ಆಧಾರದಲ್ಲಿ ಜಿಲ್ಲೆಯ 34 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಸೌಲಭ್ಯ ಇದೆ.

ಅದೇ ರೀತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೆರಿಗೆ ಸೌಲಭ್ಯ ಕಲ್ಪಿಸಬೇಕು. ಹೆಚ್ಚಿನ ಚಿಕಿತ್ಸೆಗಾಗಿ ತಜ್ಞ ವೈದ್ಯರ ಸೇವೆ ಅಗತ್ಯವೆಂದಾಗ ಮಾತ್ರ ಜಿಲ್ಲಾಸ್ಪತ್ರೆಗೆ ಗರ್ಭಿಣಿಯರನ್ನು ಕಳಿಸಬೇಕು. ಬಡವರಿಗೆ ಚಿಕಿತ್ಸೆಯಲ್ಲಿ ವಂಚನೆ ಆಗಬಾರದು ಎಂದರು.

ಆರೋಗ್ಯ ಕುರಿತು ತಾಯಂದಿರಲ್ಲಿ ಅರಿವು ಮೂಡಿಸಬೇಕು. ನವಜಾತ ಶಿಶುಗಳ ತೂಕ ಗಮನಿಸಬೇಕು. 5 ವರ್ಷದೊಳಗಿನ ಮಕ್ಕಳಿಗೆ ಸಮಯಕ್ಕೆ ಅನುಗುಣವಾಗಿ ಲಸಿಕೆ ಹಾಕಿಸಬೇಕೆಂದ ಜಿಲ್ಲಾಧಿಕಾರಿ, ಅಂಗನವಾಡಿ, ಶಾಲೆಗಳ ಸುತ್ತ ಮುತ್ತಲಿನ ಪರಿಸರ ಶುಚಿತ್ವಕ್ಕೆ ಕ್ರಮಕೈಗೊಳ್ಳುವಂತೆ ಶಿಕ್ಷಣ ಇಲಾಖಾಧಿಕಾರಿಗೆ ತಾಕೀತು ಮಾಡಿದರು.

ಡಿಎಚ್‌ಒ ಡಾ.ಪಾಲಾಕ್ಷ, ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್, ಡಾ.ಕುಮಾರಸ್ವಾಮಿ ಮತ್ತಿತರರು ಇದ್ದರು.

ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 202 ನಾರ್ಮಲ್ ಹೆರಿಗೆ ಈ ವರ್ಷದಲ್ಲಿ ಆಗಿವೆ. ತಾಲೂಕು ಆಸ್ಪತ್ರೆಗಳಲ್ಲಿ 403 ನಾರ್ಮಲ್, 494 ಸಿಜೆರಿಯನ್ ಮತ್ತು ಜಿಲ್ಲಾಸ್ಪತ್ರೆಯಲ್ಲಿ 215 ನಾರ್ಮಲ್, 432 ಸಿಜೆರಿಯನ್ ಹೆರಿಗೆಯಾಗಿವೆ ಎಂಬ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಅಗತ್ಯವಿದ್ದಲ್ಲಿ ಸಿಜೆರಿಯನ್‌ಗೆ ಸೂಚಿಸುವಂತೆ ಆರೋಗ್ಯಾಧಿಕಾರಿಗಳಿಗೆ ಖಡಕ್ಕಾಗಿ ಹೇಳಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....