ದುರ್ಗದ ಅಭಿವೃದ್ಧಿಗೆ ಶ್ರಮಿಸೋಣ

1 Min Read
ದುರ್ಗದ ಅಭಿವೃದ್ಧಿಗೆ ಶ್ರಮಿಸೋಣ

ಚಿತ್ರದುರ್ಗ: ರಾಜ್ಯದಲ್ಲಿ ವಿಶಿಷ್ಟ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಚಿತ್ರದುರ್ಗವನ್ನು ಮಾದರಿ ಜಿಲ್ಲೆಯನ್ನಾಗಿ ಅಭಿವೃದ್ಧಿಪಡಿಸಲು ನಾವೆಲ್ಲರೂ ಕಂಕಣ ಬದ್ಧರಾಗಿ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಹೇಳಿದರು.

ಜಿಲ್ಲಾಡಳಿತದಿಂದ ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಜಿಲ್ಲೆಯ ಪ್ರತಿ ನಾಗರಿಕನಿಗೆ ಶಿಕ್ಷಣ, ರಸ್ತೆ, ಕುಡಿಯುವ ನೀರು ಸೇರಿ ರಾಜ್ಯ ಮತ್ತು ಕೇಂದ್ರದ ಸವಲತ್ತು ತಲುಪಿಸುವಲ್ಲಿ ಜಿಲ್ಲಾಡಳಿತ ಅವಿರತವಾಗಿ ಶ್ರಮಿಸುತ್ತಿದೆ ಎಂದರು.

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಕೆ.ರಾಜಾನಾಯ್ಕ, ನಾಗರಾಜ, ತಿಮ್ಮರಾಜು, ಕೆ.ಸಿ.ಶಶಿಧರ್, ಸಂತೋಷ್ ಕುಮಾರ್, ಶಕುಂತಲಾಬಾಯಿ, ಟಿ.ಉಮಾಲತಾ, ಉಮೇಶ್, ಕುಲದೀಪ್, ಸಿ.ಸರಳಾ ಹಾಗೂ ವಿಶೇಷ ಪ್ರಶಸ್ತಿಗೆ ಭಾಜನರಾದ ಭಾರತಿ ಅವರನ್ನು ಗಣ್ಯರು ಗೌರವಿಸಿದರು.

ಪೊಲೀಸ್, ಸಶಸ್ತ್ರ ಮೀಸಲು ಪಡೆ, ಗೃಹರಕ್ಷಕ ದಳ, ಅರಣ್ಯ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ಸೇರಿ ವಿವಿಧ ಶಾಲಾ, ಕಾಲೇಜುಗಳ ತಂಡಗಳಿಂದ ಜಿಲ್ಲಾಧಿಕಾರಿ ಗೌರವ ವಂದನೆ ಸ್ವೀಕರಿಸಿದರು.

ಸರ್ಕಾರಿ ಬಾಲಕಿಯರ ಪ.ಪೂ.ಕಾಲೇಜು, ರಾಕ್‌ಪೋರ್ಟ್ ವಿದ್ಯಾಸಂಸ್ಥೆ, ಚಿನ್ಮೂಲಾದ್ರಿ-ವಿದ್ಯಾಭಾರತಿ ಪ್ರೌಢಶಾಲೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಪಂ ಅಧ್ಯಕ್ಷೆ ಜಿ.ಎಂ.ವಿಶಾಲಾಕ್ಷಿ ನಟರಾಜ್, ಸಿಇಒ ಸಿ.ಸತ್ಯಭಾಮಾ, ಎಸ್ಪಿ ಡಾ.ಕೆ.ಅರುಣ್, ಎಎಸ್ಪಿ ಎಂ.ಬಿ.ನಂದಗಾವಿ, ಎಡಿಸಿ ಸಿ.ಸಂಗಪ್ಪ, ನಗರಸಭೆ ಆಯುಕ್ತ ಜಿ.ಟಿ.ನಟರಾಜು, ಎಸಿ ವಿ.ಪ್ರಸನ್ನಕುಮಾರ್, ತಹಸೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ಕುಡಾ ಆಯುಕ್ತ ಸೋಮಶೇಖರ್ ಇತರರಿದ್ದರು.

See also  ಶುದ್ಧ ಕುಡಿವ ನೀರು ಪೂರೈಕೆಗೆ ಆದ್ಯತೆ: ಹೊಳಲ್ಕೆರೆ ಶಾಸಕ ಚಂದ್ರಪ್ಪ ಭರವಸೆ
Share This Article