More

  ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಜನರ ಪ್ರೋತ್ಸಾಹ ಅಗತ್ಯ

  ಚಿತ್ರದುರ್ಗ: ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಜನರ ಪ್ರೋತ್ಸಾಹ ಅಗತ್ಯವಿದೆ ಎಂದು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಹೇಳಿದರು.

  ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಯೋಜಿಸಿದ್ದ ಕನ್ನಡದ ದಿನೋತ್ಸವ ಉದ್ಘಾಟಿಸಿ ಮಾತನಾಡಿದರು.

  ನಾಡು, ನುಡಿ, ನೆಲ, ಜಲ ರಕ್ಷಣೆ ನಮ್ಮೆಲ್ಲರ ಹೊಣೆ. ಇದಕ್ಕಾಗಿ ಕೆಲಸ ಮಾಡುವವರಿಗೆ ನಾವು ಪ್ರೋತ್ಸಾಹಿಸಬೇಕು. ಕೆಲ ದಿನಗಳಿಂದ ಪುನಃ ಗಡಿ ಸಮಸ್ಯೆ ಶುರುವಾಗಿದೆ. ಇದನ್ನು ಧೈರ್ಯದಿಂದ ಹಿಮ್ಮೆಟ್ಟಿಸಬೇಕು ಎಂದರು.

  ಕುವೆಂಪು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜಾತಿ, ಧರ್ಮ ಮೀರಿ ಬೆಳೆದರು. ಜತೆಗೆ ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಹೆಮ್ಮೆ ಅವರಿಗಿದೆ ಎಂದು ಹೇಳಿದರು.

  ಸಾಹಿತಿ ನಿರಂಜನ ದೇವರಮನೆ ಉಪನ್ಯಾಸ ನೀಡಿದರು. ವೇದಿಕೆ ಜಿಲ್ಲಾಧ್ಯಕ್ಷ ಕೆ.ಆರ್.ಮಂಜುನಾಥ್, ಉದ್ಯಮಿ ಸುರೇಶ್‌ಬಾಬು, ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಲಕ್ಷ್ಮಣ್, ವೇದಿಕೆ ಉಪಾಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್, ಸಂಚಾಲಕ ಜಯಣ್ಣ ಉಪಸ್ಥಿತರಿದ್ದರು.

  See also  ರಾಜೀವ್ ಅಧಿಕಾರ ವಿಕೇಂದ್ರೀಕರಣದ ನೇತಾರ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts