More

    ಬೋಧನೇಲಿ ಆಧುನಿಕತೆ ಅಳವಡಿಸಿಕೊಳ್ಳಿ

    ಚಿತ್ರದುರ್ಗ: ಪರಿಣಾಮಕಾರಿ ಬೋಧನೆಗೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವಂತೆ ದಾವಣಗೆರೆ ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದ ಮುಖ್ಯಸ್ಥ ಡಾ.ಜೆ.ವೆಂಕಟೇಶ್ ಶಿಕ್ಷಕರಿಗೆ ಸಲಹೆ ನೀಡಿದರು.

    ನಗರದ ಪಿಳ್ಳೆಕೆರನಹಳ್ಳಿ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಹತ್ತು ಬೆಳದಿಂಗಳು ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ತಂತ್ರಜ್ಞಾನ ಪ್ರಸ್ತುತ ಜಗತ್ತಿನ ವಿದ್ಯಮಾನದ ಪ್ರತಿಬಿಂಬ. ಬಿಇಡಿ ಶಿಕ್ಷಣಕ್ಕೆ ಇಂದು ಬಹಳ ಮಹತ್ವವಿದೆ. ಇದರ ಅಧ್ಯಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಶಿಕ್ಷಣಾರ್ಥಿಗಳು ಶಿಕ್ಷಕರಾದ ನಂತರ ಬೋಧನೆಯೊಂದಿಗೆ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

    ಸಿರಿಗೆರೆ ಶಿಕ್ಷಣ ಸಂಸ್ಥೆಗಳ ಆಡಳಿತಾಕಾರಿ ಎಚ್.ವಿ.ವಾಮದೇವಪ್ಪ ಮಾತನಾಡಿ, ದೇಶದ ಭವಿಷ್ಯ ನಿರ್ಮಾಣವಾಗುವುದು ಶಾಲೆಗಳಲ್ಲಿದೆ ಎಂಬ ಮಾತಿದೆ. ಆದರೆ, ದೇಶದ ಭವಿಷ್ಯ ಅಡಗಿರೋದು ಮಕ್ಕಳನ್ನು ನಾವು ಹೇಗೆ ರೂಪಿಸುತ್ತೇವೆ ಎನ್ನುವುದರ ಮೇಲಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ ಎಂದು ತಿಳಿಸಿದರು.

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ.ಜಂಬುನಾಥ್ ಅವರನ್ನು ಸನ್ಮಾನಿಸಲಾಯಿತು. 2017-19ನೇ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ಪ್ರಿಯಾಂಕಾ, ಬಿ.ಎಸ್.ಪುನೀತ್, ಜಫ್ರೀನ್ ಸಲ್ಮಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆ ಕಾರ್ಯದರ್ಶಿ ಕೆ.ಎಂ.ವೀರೇಶ್, ಪ್ರಾಂಶುಪಾಲೆ ಎಂ.ಆರ್.ಜುಯಲಕ್ಷ್ಮೀ, ಎ.ಎಂ.ರುದ್ರಪ್ಪ, ಗಣೇಶಯ್ಯ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts