ಚಿತ್ರದುರ್ಗ: ಕೋವಿಡ್-19 ವೈರಸ್ ಹರಡುವ ಭೀತಿಯಿಂದ ಹಾಗೂ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಜಿಲ್ಲಾದ್ಯಂತ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆದೇಶಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಪಾನ್ ಮಸಾಲ, ಜರ್ದಾ, ಖೈನಿ ಮೊದಲಾದವುಗಳನ್ನು ಬಳಸಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜತೆಗೆ ಕ್ಷಯ, ನ್ಯುಮೋನಿಯಾ ಮತ್ತು ಕೋವಿಡ್-19 ಮೊದಲಾದ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಲಿದೆ.
ಬೀಡಿ, ಸಿಗರೇಟ್ ಸೇದುವುದರಿಂದಲೂ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪಾನ್‌ಮಸಾಲ ಹಾಗೂ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.