More

    ಹತ್ಯೆ ತಡೆಗೆ ಬೇಕು ಪ್ರಬಲ ಕಾನೂನು; ಮಾಜಿ ಸಚಿವ ಈಶ್ವರಪ್ಪ ಅನಿಸಿಕೆ

    ಚಿತ್ರದುರ್ಗ: ರಾಜ್ಯದಲ್ಲಿ ಸೈದ್ಧಾಂತಿಕ ವಿಚಾರಗಳ ಹಿನ್ನೆಲೆಯಲ್ಲಿ ನಡೆಯುವಂತಹ ಹತ್ಯೆ ತಡೆಗೆ ವಿಶೇಷ ಕಾನೂನು ರೂಪಿಸುವ ಅಗತ್ಯವಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರವೀಣ್ ನಂತಹವರ ಹತ್ಯೆಯಂತಹ ದುಷ್ಕೃತ್ಯ ಮರುಕಳಿಸದಂತೆ ವಿಶೇಷ ಕಾನೂನು ಜಾರಿಗೊಳಿಸಲು ಮುಖ್ಯಮಂತ್ರಿ, ಪ್ರಧಾನಿ ಹಾಗೂ ಕೇಂದ್ರದ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

    ನಮ್ಮ ರಾಜ್ಯದಲ್ಲೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆ ದಿಟ್ಟ ನಿಲುವು ತೆಗೆದುಕೊಳ್ಳದಿದ್ದರೆ ಹತ್ಯೆ ತಡೆ ಅಸಾಧ್ಯ ಎನಿಸುತ್ತದೆ. ಬಿಜೆಪಿ ಅಧಿಕಾರದಲ್ಲಿದ್ದರೂ ಪಕ್ಷದ ಕಾರ್ಯಕರ್ತರಿಗೆ ಸಂಪೂರ್ಣ ರಕ್ಷಣೆ ಸಿಗುತ್ತಿಲ್ಲ. ಕೊಲೆಗಾರರನ್ನು ಶೀಘ್ರ ಪತ್ತೆ ಹಚ್ಚಿ ಪ್ರವೀಣ್ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ರಾಷ್ಟ್ರ ದ್ರೋಹಿ ಸಂಘಟನೆಗಳ ಪಾತ್ರದ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದ್ವಂದ್ವ ಹೇಳಿಕೆ ನೀಡುತ್ತ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ದುಷ್ಕೃತ್ಯಕ್ಕೆ ಕಾರಣರಾಗಿರುವ ಮುಸ್ಲಿಂ ಗೂಂಡಾಗಳನ್ನು ಬಂಧಿಸಬೇಕೆಂದು ಏಕೆ ನೇರವಾಗಿ ಹೇಳುತ್ತಿಲ್ಲ? ಮುಸಲ್ಮಾನರನ್ನು ಓಲೈಸುತ್ತಿರುವ ಅವರ ಮೈಯಲ್ಲಿ ಯಾವ ರಕ್ತ ಹರಿಯುತ್ತಿದೆ ? ಎಂದು ಪ್ರಶ್ನಿಸಿದರು.

    ಡಿಕೆಶಿ ಮತ್ತೆ ಜೈಲಿಗೆ ಹೋಗಬಹುದು:
    ಜಾಮೀನು ಮೇಲಿರುವ ಡಿ.ಕೆ.ಶಿವಕುಮಾರ್ ಮತ್ತೆ ಜೈಲಿಗೆ ಹೋಗಬಹುದು. ಅಪ್ಪಟ ಜಾತಿವಾದಿಗಳಾಗಿರುವ ಡಿಕೆಶಿ, ಸಿದ್ದರಾಮಯ್ಯ ಅವರಿಗೆ ಜನ ಅಧಿಕಾರ ಕೊಡಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ನಿರಪರಾಧಿ ಎಂಬುದನ್ನು ಸಹಿಸಿಕೊಳ್ಳಲು ಕಾಂಗ್ರೆಸ್‌ನವರಿಗೆ ಸಾಧ್ಯವಾಗುತ್ತಿಲ್ಲ. ಬಿ ರಿಪೋರ್ಟ್ ಪ್ರಶ್ನಿಸಿ ಕಾಂಗ್ರೆಸ್ ಕೋರ್ಟಿಗೆ ಹೋಗಲಿ ಎಂದು ಸವಾಲು ಹಾಕಿದರು.
    ರಾಜೀನಾಮೆ ಕೊಡಬೇಡಿ:
    ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ನಮ್ಮ ಪಕ್ಷದವರು ರಾಜೀನಾಮೆ ಕೊಟ್ಟರೆ ಪ್ರತಿಪಕ್ಷದವರಿಗೆ ಅಸ್ತ್ರ ಕೊಟ್ಟಂತಾಗುತ್ತದೆ. ಹಿಂದುತ್ವವನ್ನು ಹತ್ತಿಕ್ಕುತ್ತಿರುವ ಕಾಂಗ್ರೆಸ್ ವಿರುದ್ಧ ಆಕ್ರೋಶವಿರಬೇಕೆ ಹೊರತು ತಮ್ಮದೇ ಪಕ್ಷದ ಮೇಲಲ್ಲ. ಹಾಗಾಗಿ ರಾಜೀನಾಮೆ ಹಿಂಪಡೆಯಿರಿ ಎಂದು ಮುಖಂಡರಿಗೆ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts