ಸಂವಿಧಾನ ರಕ್ಷಣೆ ಎಲ್ಲರ ಜವಾಬ್ದಾರಿ

ಚಿತ್ರದುರ್ಗ: ದೇಶಕ್ಕೆ ರಕ್ಷಾ ಕವಚವಾಗಿರುವ ಸಂವಿಧಾನ ಅಪಾಯಕ್ಕೆ ಸಿಲುಕಿದ್ದು, ಅದನ್ನು ರಕ್ಷಿಸುವ ಹೊಣೆ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಸಾಮಾಜಿಕ ಚಿಂತಕ ಅರಕಲವಾಡಿ ನಾಗೇಂದ್ರ ಹೇಳಿದರು.

ನಗರದ ಕ್ರೀಡಾಭವನದಲ್ಲಿ ಭಾನುವಾರ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘ ಆಯೋಜಿಸಿದ್ದ ‘ಭಾರತ ಸಂವಿಧಾನ ಮತ್ತು ಸಮಕಾಲೀನ ಸ್ಥಿತಿಗತಿಗಳು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಜ್ಯಾತ್ಯತೀತ ದೇಶದಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಸಂವಿಧಾನ ಸಾಕಷ್ಟು ಕೊಡುಗೆ ನೀಡಿದೆ. 130 ಕೋಟಿ ಜನರು ಸಮಾನತೆಯಿಂದ ಬದುಕಲು ಸಹಕಾರಿಯಾಗಿದೆ ಎಂದರು.

ನಿವೃತ್ತ ಪ್ರಾಚಾರ್ಯ ಬಿ.ಆರ್. ಶಿವಕುಮಾರ್ ಮಾತನಾಡಿ, ಸಂವಿಧಾನ ಹಾಗೂ ಅಂಬೇಡ್ಕರ್ ವಿಚಾರ ಧಾರೆ ಅರ್ಥ ಮಾಡಿಕೊಂಡರೆ ಮಾತ್ರ ಬದಲಾವಣೆ ಸಾಧ್ಯ ಎಂದು ಹೇಳಿದರು.

ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ಜಿಲ್ಲಾಧ್ಯಕ್ಷ ಚಂದ್ರಪ್ಪ, ಮಾಜಿ ಅಧ್ಯಕ್ಷ ಜಗನ್ನಾಥ, ಪ್ರಧಾನ ಕಾರ್ಯದರ್ಶಿ ಎನ್. ರಾಘವೇಂದ್ರ, ಸಂಘಟನಾ ಕಾರ್ಯದರ್ಶಿ ಟಿ. ಶ್ರೀನಿವಾಸ್, ಉಪನ್ಯಾಸಕ ತಿಪ್ಪೇಸ್ವಾಮಿ ಕೆರೆಯಗಳಹಳ್ಳಿ, ಬಿ.ಪಿ. ತಿಪ್ಪೇಸ್ವಾಮಿ, ಡಾ.ಬಿ.ಎಂ. ಗುರುನಾಥ್ ಉಪಸ್ಥಿತರಿದ್ದರು.